April 2026

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ(ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದ್ದು, ಇಂದಿನಿಂದಲೇ ತಮ್ಮ ಸಾಧನೆಯನ್ನು ವೀಕ್ಷಿಸಬಹುದಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್ ಗೆ ಸದ್ಯ ಫಲಿತಾಂಶವನ್ನು ಎಸ್ ಎಂ ಎಸ್ […]

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್ Read More »

ಇಂಟರ್ನೆಟ್ ಪ್ಯಾಕ್ ಇಲ್ಲದ ಅಗ್ಗದ ಯೋಜನೆಗಳನ್ನು ಕಡ್ಡಾಯವಾಗಿ ನೀಡಿ| ಟೆಲಿಕಾಂ ಕಂಪನಿಗಳಿಗೆ ಟ್ರಾಯ್ ಸೂಚನೆ

ಸಮಗ್ರ ನ್ಯೂಸ್: ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಟೆಲಿಕಾಂ ಕಂಪನಿಗಳಿಗೆ ಕೇವಲ ವಾಯ್ಸ್ ಕಾಲಿಂಗ್ ಮತ್ತು ಎಸ್‌ಎಂಎಸ್ ಸೌಲಭ್ಯಗಳಿರುವ ಅಗ್ಗದ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಲು ನಿರ್ದೇಶಿಸಿದೆ. ಟೆಲಿಕಾಂ ಕಂಪನಿಗಳು ಇನ್ನು ಮುಂದೆ ಕೇವಲ ವಾಯ್ಸ್ ಕಾಲಿಂಗ್ (Voice Calling) ಮತ್ತು ಎಸ್‌ಎಂಎಸ್ (SMS) ಸೌಲಭ್ಯಗಳನ್ನು ಮಾತ್ರ ಒಳಗೊಂಡಿರುವ ಕಡಿಮೆ ಬೆಲೆಯ ಮೊಬೈಲ್ ಪ್ಲಾನ್‌ಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) ನಿರ್ದೇಶನ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿರುವ ಹೆಚ್ಚಿನ ರೀಚಾರ್ಜ್ ಪ್ಲಾನ್‌ಗಳಲ್ಲಿ ಡೇಟಾ (Data)

ಇಂಟರ್ನೆಟ್ ಪ್ಯಾಕ್ ಇಲ್ಲದ ಅಗ್ಗದ ಯೋಜನೆಗಳನ್ನು ಕಡ್ಡಾಯವಾಗಿ ನೀಡಿ| ಟೆಲಿಕಾಂ ಕಂಪನಿಗಳಿಗೆ ಟ್ರಾಯ್ ಸೂಚನೆ Read More »

ಮಂಗಳೂರು: ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಈ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯವನ್ನು ತೊರೆದು, ಬಾಡಿಗೆ ಮನೆಯಲ್ಲಿ ವಾಸವಿದ್ದುಕೊಂಡು ಮಾದಕ ಪದಾರ್ಥಗಳ ಮಾರಾಟ ಜಾಲದಲ್ಲಿ ತೊಡಗಿದ್ದರು ಎಂದು ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್, ‘ವಿದ್ಯಾರ್ಥಿಯೊಬ್ಬನ ಬ್ಯಾಗಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿತ್ತು. ಆತನ ಪೋಷಕರು ಈ ಬಗ್ಗೆ ನಮಗೆ ಮಾಹಿತಿ ನೀಡಿದ್ದರು. ಆ ಮಾಹಿತಿಯನ್ನು ಆಧರಿಸಿ, ಆತನಿಗೆ

ಮಂಗಳೂರು: ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್ Read More »

ಹವಾಮಾನ ವರದಿ| ಗಾಳಿಯ ಪಥ ಬದಲಾವಣೆ| ನಿರೀಕ್ಷೆಯಂತೆ ಬೀಳದ ಮಳೆ| ಕರಾವಳಿಯಲ್ಲಿ ಉರಿಬಿಸಿಲು, ತಾಪಮಾನ ಏರುಪೇರು

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಗಾಳಿಯ ತೀವ್ರತೆ ಹೆಚ್ಚಿದ್ದರೂ ಕಳೆದ ಕೆಲವು ದಿನಗಳಿಂದ ತಾಪಮಾನದಲ್ಲಿ ನಿರಂತರ ಏರಿಕೆ ಕಂಡು ಬರುತ್ತಿದೆ. ಸುಮಾರು ಒಂದು ವಾರದಿಂದ, ಬೆಳಿಗ್ಗೆ ಮತ್ತು ರಾತ್ರಿಯಲ್ಲಿ ಗಾಳಿ ಬೀಸುತ್ತಿದ್ದು, ಇದರಿಂದ ಮೋಡಗಳು ಚದುರಿಹೋಗಿ, ಮಳೆಯಾಗುತ್ತಿಲ್ಲ. ಪೂರ್ವ ಮಾನ್ಸೂನ್ ಋತುವಿನಲ್ಲಿ, ಗಾಳಿಯು ಸಾಮಾನ್ಯವಾಗಿ ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದ ಕಡೆಗೆ ಬೀಸುತ್ತದೆ, ಮೋಡಗಳ ರಚನೆಗೆ ಸಹಾಯ ಮಾಡುತ್ತದೆ ಮತ್ತು ಮಳೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದಾಗ್ಯೂ, ಇತ್ತೀಚಿನ ವಾರಗಳಲ್ಲಿ, ಗಾಳಿಯು ವಿರುದ್ಧ ದಿಕ್ಕಿನಲ್ಲಿ ಬೀಸುತ್ತಿದೆ-ಅರೇಬಿಯನ್ ಸಮುದ್ರದಿಂದ ಬಂಗಾಳ

ಹವಾಮಾನ ವರದಿ| ಗಾಳಿಯ ಪಥ ಬದಲಾವಣೆ| ನಿರೀಕ್ಷೆಯಂತೆ ಬೀಳದ ಮಳೆ| ಕರಾವಳಿಯಲ್ಲಿ ಉರಿಬಿಸಿಲು, ತಾಪಮಾನ ಏರುಪೇರು Read More »

ನಾಳೆ(ಎ.9) ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ| ಚು. ಆಯೋಗದಿಂದ ಸಕಲ ಸಿದ್ದತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಉಪಚುನಾವಣೆ ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್​ ಮಾಡಲು ಸಜ್ಜಾಗಿದ್ದಾರೆ. ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ

ನಾಳೆ(ಎ.9) ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆ| ಚು. ಆಯೋಗದಿಂದ ಸಕಲ ಸಿದ್ದತೆ Read More »

ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ನಾಳೆ ಚುನಾವಣೆ| ಚು. ಆಯೋಗದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮಂಗಳವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳು ಈಗ ಮನೆ ಮನೆ ಪ್ರಚಾರದತ್ತ ಗಮನ ಹರಿಸಿದ್ದಾರೆ. ಈ ಮೂರೂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನಲ್ಲಿ 18-19 ವರ್ಷ ವಯಸ್ಸಿನ ಸುಮಾರು 57.5 ಮಿಲಿಯನ್ ಯುವಕರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ವಿಶೇಷ. ಇತ್ತ

ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ನಾಳೆ ಚುನಾವಣೆ| ಚು. ಆಯೋಗದಿಂದ ಸಕಲ ಸಿದ್ಧತೆ Read More »

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಳೆಂದು ಸಾವಿಗೆ ಶರಣಾದ ಪ್ರಿಯಕರ| ಮನೆಯವರ ವಿರೋಧಕ್ಕೆ ಮಸಣ ಪಾಲಾದ ಪ್ರೀತಿ!!

ಸಮಗ್ರ ನ್ಯೂಸ್: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ. ಮದುವೆ ವಿಚಾರವಾಗಿ ಮನೆಯವರ ವಿರೋಧ ಎದುರಿಸಿದ ಹಿನ್ನೆಲೆಯಲ್ಲಿ, ಇಬ್ಬರು ಪ್ರೇಮಿಗಳು ಚರ್ಚೆ ನಡೆಸುವ ವೇಳೆ ಗಲಾಟೆ ಉಂಟಾಗಿ ವೈಮನಸ್ಸು ಉಂಟಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ ನಿವಾಸಿ ಪವಿತ್ರಾ ಒಂಟಿ (19) ಹಾಗೂ ಅಸ್ಕಿ ಗ್ರಾಮದ ಕಾರ್ತಿಕ್ ನಾಯಕ್ (19) ಮೃತಪಟ್ಟ

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಳೆಂದು ಸಾವಿಗೆ ಶರಣಾದ ಪ್ರಿಯಕರ| ಮನೆಯವರ ವಿರೋಧಕ್ಕೆ ಮಸಣ ಪಾಲಾದ ಪ್ರೀತಿ!! Read More »

ಕದನ ವಿರಾಮ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ತೆರವು| ತೈಲ ಸಾಗಣೆ ಸುಗಮ, ಕಚ್ಚಾ ತೈಲ‌ ಬೆಲೆಯಲ್ಲಿ ಕುಸಿತ

ಸಮಗ್ರ ನ್ಯೂಸ್: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಒಪ್ಪಿಗೆ ಕೊಡುತ್ತಿದ್ದಂತೆ ಇತ್ತ ಇರಾನ್ ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಅನುಮತಿ ನೀಡಿದ್ದು, ಇರಾನ್​ನಿಂದ ತೈಲ ಸಾಗಾಟ ಸುಗಮವಾಗಲಿದೆ. ಭಾರತ ಸೇರಿ ಅನೇಕ ದೇಶಗಳಿಗೆ ಇದರಿಂದ ಅನುಕೂಲವಾಗಲಿದೆ.  ಇರಾನ್ ಮೇಲಿನ ದಾಳಿಯನ್ನು ಎರಡು ವಾರಗಳ ಕಾಲ ಮುಂದೂಡಲು ಅಮೆರಿಕ ಅಧ್ಯಕ್ಷ ಟ್ರಂಪ್ ನಿರ್ಧರಿಸಿದ್ದು, ಜಾಗತಿಕ ಮಾರುಕಟ್ಟೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಘೋಷಣೆಯ ನಂತರ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಕುಸಿದಿವೆ ಮತ್ತು ಅಮೆರಿಕದ ಷೇರುಗಳು

ಕದನ ವಿರಾಮ ಬೆನ್ನಲ್ಲೇ ಹಾರ್ಮುಜ್ ಜಲಸಂಧಿ ತೆರವು| ತೈಲ ಸಾಗಣೆ ಸುಗಮ, ಕಚ್ಚಾ ತೈಲ‌ ಬೆಲೆಯಲ್ಲಿ ಕುಸಿತ Read More »

ಶಿಕ್ಷಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ| ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಎಸ್ಐ ಸಂದೇಶ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಯೊಂದರ ಮುಖ್ಯ ಶಿಕ್ಷಕಿ ಮೇಲೆ ಪದೇ ಪದೇ ಅತ್ಯಾಚಾರ ಮಾಡಿದ ಆರೋಪದಲ್ಲಿ ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಮೂಡಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಪಿ.ಜಿ.ಸಂದೇಶ್‌ ಅವರಿಗೆ ಚಾಟಿ ಬೀಸಿದ ಹೈಕೋರ್ಟ್, ‘ಒಬ್ಬ ಪೊಲೀಸ್ ಅಧಿಕಾರಿಯಾಗಿ ಹೀಗೆಲ್ಲ ಮಾಡುವಂತಿಲ್ಲ’ ಎಂದು ಕಟುವಾಗಿ ಹೇಳಿದೆ. ಅತ್ಯಾಚಾರ ಆರೋಪ ಸಂಬಂಧ ಶಿಕ್ಷಕಿಯೊಬ್ಬರು ದಾಖಲಿಸಿರುವ ದೂರು ಆಧರಿಸಿ ದಕ್ಷಿಣ ಕನ್ನಡದ ವೇಣೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪಿ.ಜಿ.ಸಂದೇಶ್‌, ಉಡುಪಿಯ ಸ್ಮಿತಾ ಪೂರ್ಣಿಮಾ ಆರ್‌.ಮಲ್ಯ ಮತ್ತು ಮಂಗಳೂರಿನ

ಶಿಕ್ಷಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ| ಕೇಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್ ಪಡೆದ ಎಸ್ಐ ಸಂದೇಶ್ Read More »

ಮಧ್ಯಪ್ರಾಚ್ಯ ಯುದ್ದಕ್ಕೆ ವಿರಾಮ| ಅಮೇರಿಕಾ, ಇರಾನ್ ಹೇಳಿದ್ದಿಷ್ಟು…

ಸಮಗ್ರ ನ್ಯೂಸ್: ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ ಅಮೆರಿಕದ ಅಧ್ಯಕ್ಷ ಟ್ರಂಪ್ ರಣಭೀಕರ ದಾಳಿಯ ಡೆಡ್​​ಲೈನ್ ಮುಗಿದಿದೆ. ಅಷ್ಟರಲ್ಲಿ ಅಮೆರಿಕ, ಇರಾನ್ 2 ವಾರಗಳ ಕದನ ವಿರಾಮ ಘೋಷಣೆ ಒಪ್ಪಂದಕ್ಕೆ ಬಂದಿವೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಅಮೆರಿಕದ ಫೈಟರ್ ಜೆಟ್‌ಗಳು ದಾಳಿ ಮಾಡಬೇಕಿತ್ತು, ಅಷ್ಟರಲ್ಲಿ ತ್ಕಾಲಿಕ ಕದನ ವಿರಾಮ ಘೋಷಣೆಯಾಗಿದೆ. ಪಾಕಿಸ್ತಾನದ ಪ್ರಧಾನಿ ಮತ್ತು ಸೇನಾ ಮುಖ್ಯಸ್ಥರ ಮನವಿಯ ಮೇರೆಗೆ ಟ್ರಂಪ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಫೀಲ್ಡ್ ಮಾರ್ಷಲ್

ಮಧ್ಯಪ್ರಾಚ್ಯ ಯುದ್ದಕ್ಕೆ ವಿರಾಮ| ಅಮೇರಿಕಾ, ಇರಾನ್ ಹೇಳಿದ್ದಿಷ್ಟು… Read More »