ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವು

ಸಮಗ್ರ ನ್ಯೂಸ್: ಮನೆಯಲ್ಲಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ರಮ (19) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ. ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಯ ಪುತ್ರಿಯಾಗಿರುವ ರಮ, ವಾಮದಪದವು ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.

Ad Widget ... ..

ಏಪ್ರಿಲ್ 19ರಂದು ರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದ ಇವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 10 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ರಮ, ಏಪ್ರಿಲ್ 29ರಂದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಏಪ್ರಿಲ್ 30ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ad Widget

Leave a Comment

Your email address will not be published. Required fields are marked *