ವಿಜಯ್, ಮಮತಾಗೆ ಪೋನಾಯಿಸಿದ ರಾಗಾ| ತಮಿಳುನಾಡಿನಲ್ಲಿ ಅಧಿಕಾರ ಸ್ಥಾಪನೆಯ ಕಸರತ್ತು!!

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಟಿಎಂಸಿ ನೆಲಕಚ್ಚಿದರೆ, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಕಂಡಿದೆ. ಇತ್ತ ಅಸ್ಸಾಂನಲ್ಲಿ ಹಿಮಂತ ಬಿಸ್ವ ಶರ್ಮಾ ನೇೃತ್ವದ ಬಿಜೆಪಿ ಹ್ಯಾಟ್ರಿಕ್ ಗೆಲವು ಕಂಡಿದೆ.

. Ad Widget . Ad Widget . Ad Widget .

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರ ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಿಢೀರ್ ಟಿವಿಕೆ ನಟ ವಿಜಯ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಭರ್ಜರಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ಸೋಲಿನ ಅಘಾತದಲ್ಲಿರುವ ಮಮತಾ ಬ್ಯಾನರ್ಜಿ ಹಾಗೂ ಎಂಕೆ ಸ್ಟಾಲಿನ್ ಜೊತೆಗೂ ಮಾತನಾಡಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಗೆಲುವು ದಾಖಸಿ ಬಹುಮತದತ್ತ ದಾಪುಗಾಲಿಟ್ಟಿದೆ. ಇದರ ಬೆನ್ನಲ್ಲೇ ವಿಜಯ್‌ಗೆ ಜೊತೆ ಫೋನ್ ಮೂಲಕ ಮಾತನಾಡಿದ ರಾಹುಲ್ ಗಾಂಧಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಗೆಲುವು ಯುವ ಸಮೂಹದ ಧ್ವನಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಯುವ ಸಮೂಹದ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಮಾತುಕತೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುತ್ತಾ ಅನ್ನೋ ಚರ್ಚೆಗಳು ಶುರುವಾಗಿದೆ. ತಮಿಳುನಾಡಿನಲ್ಲಿ ಒಟ್ಟು 5 ಸ್ಥಾನದಲ್ಲಿರುವ ಕಾಂಗ್ರೆಸ್ , ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿ ಸರ್ಕಾರ ರಚಿಸಲು ನೆರವಾಗುತ್ತಾ ಅನ್ನೋ ಚರ್ಚೆಗಳು ನಡೆಯುತ್ತಿದೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿರುವ ಟಿಎಂಸಿ ಮಕಾಡೆ ಮಲಗಿದೆ. ಇದರ ಬೆನ್ನಲ್ಲೇ ಕರೆ ಮಾಡಿ ಮಾತನಾಡಿದ ರಾಹುಲ್ ಗಾಂಧಿ ಪರಿಸ್ಥಿತಿ ಕುರಿತು ಅವಲೋಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ರಾಹುಲ್ ಗಾಂಧಿ ಮಾತನಾಡಿದ್ದಾರೆ.

Leave a Comment

Your email address will not be published. Required fields are marked *