ವಿಟ್ಲ: ಅಮಲು ಪದಾರ್ಥ ಸೇವಿಸಿ ಅನುಚಿತ ವರ್ತನೆ| ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದಾತ ಬಂಧನ

ಸಮಗ್ರ ನ್ಯೂಸ್: ಅಮಲು ಪದಾರ್ಥ ಸೇವಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

. Ad Widget . Ad Widget . Ad Widget .

ವಿಟ್ಲ ಪೊಲೀಸ್ ಉಪ ನಿರೀಕ್ಷಕರಾದ ಬಿ.ಎಸ್. ನಾಯಕ್ ಅವರು ಸಿಬ್ಬಂದಿಗಳೊಂದಿಗೆ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಸ್ಕೂಟರ್‌ನಲ್ಲಿ ಬಂದ ಅಸ್ಬೀರ್ ಹೆಲ್ಮೆಟ್ ಧರಿಸಿರಲಿಲ್ಲ. ಪೊಲೀಸರು ಆತನನ್ನು ತಡೆದು ವಿಚಾರಿಸಿದಾಗ, ಆರೋಪಿತನು ಉಪ ನಿರೀಕ್ಷಕರೊಂದಿಗೆ ಅತ್ಯಂತ ಅನುಚಿತವಾಗಿ ವರ್ತಿಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ್ದಾನೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಆರೋಪಿಯ ವಿಚಿತ್ರ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ತಾನು ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ತಕ್ಷಣ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮಾದಕ ದ್ರವ್ಯ ಸೇವಿಸಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆ (NDPS Act), ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಮೋಟಾರು ವಾಹನ ಕಾಯ್ದೆಯಡಿ (IMV Act) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *