ಹವಾಮಾನ ವರದಿ| ರಾಜ್ಯದಲ್ಲಿ ಇನ್ನೂ ಮೂರು ದಿನ ಉತ್ತಮ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಎಫೆಕ್ಟ್‌ ಇದಾಗಿದೆ.

. Ad Widget . Ad Widget

ಹವಾಮಾನದಲ್ಲಿ ವಿಭಿನ್ನ ಬದಲಾವಣೆ ಕಾಣಿಸಿದ್ದು, ಆಲಿಕಲ್ಲು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ನಾಳೆ ಹಾಗೂ ನಾಡಿದ್ದು ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಸಹಿತ ಮಳೆ, ನಾಡಿದ್ದು ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆ ಬೀಳಲಿದೆ.

. Ad Widget . . Ad Widget . Ad Widget

ನಾಳೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಕೊಪ್ಪಳದಲ್ಲಿ ಮಳೆ ನೀಳಲಿದೆ. ಶಿವಮೊಗ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿಯಲ್ಲಿ ದಟ್ಟ ಆಲಿಕಲ್ಲು ಸಹಿತ ಮಳೆ ಬೀಳಲಿದೆ.

Leave a Comment

Your email address will not be published. Required fields are marked *