ತೈಲ ಗ್ರಾಹಕರಿಗೆ ಬಿಗ್ ಶಾಕ್| ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ

ಸಮಗ್ರ ನ್ಯೂಸ್: ಭಾರತದಾದ್ಯಂತ ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಮತ್ತೊಮ್ಮೆ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 91 ಪೈಸೆ ಹೆಚ್ಚಳವಾಗಿದೆ.

Ad Widget ... ..

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಗಣನೀಯ ಏರಿಕೆ ಮಾಡಲಾಗಿದ್ದು, ವಾಹನ ಸವಾರರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಂತಾಗಿದೆ.

Ad Widget

ಇಂದಿನ ಪರಿಷ್ಕೃತ ದರಗಳ ಪ್ರಕಾರ, ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 87 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ 91 ಪೈಸೆ ಹೆಚ್ಚಳವಾಗಿದೆ.

ಪ್ರಸಕ್ತ ತಿಂಗಳಿನಲ್ಲಿ ಇಂಧನ ದರವನ್ನು ಪರಿಷ್ಕರಿಸುತ್ತಿರುವುದು ಇದು ಮೂರನೇ ಬಾರಿಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದಾಗಿ ಮುಂಬರುವ ದಿನಗಳಲ್ಲಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಿ, ನಿತ್ಯಬಳಕೆಯ ತರಕಾರಿ, ಹಾಲು ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ.

Leave a Comment

Your email address will not be published. Required fields are marked *