ಬೆಂಗಳೂರು : ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್ : ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್‌ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು.  

Ad Widget ... ..

 943 ಕೋಟಿ ರೂಪಾಯಿಯ ಈ ಬೃಹತ್ ಯೋಜನೆಯು 80 ಎಕರೆಗಳಷ್ಟು ವಿಸ್ತೀರ್ಣದಲ್ಲಿದ್ದು, 80,000 ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಹೊಂದಲಿದೆ. ಇದು ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.

Ad Widget

ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ಸುಮಾರು 100 ಎಕರೆ ಜಾಗದಲ್ಲಿ, ಸುಮಾರು 943 ಕೋಟಿ ರೂಪಾಯಿ ಭಾರಿ ವೆಚ್ಚದಲ್ಲಿ ಈ ಅತ್ಯಾಧುನಿಕ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಕ್ರೀಡಾಂಗಣವನ್ನು ಕೇವಲ 2 ರಿಂದ 3 ವರ್ಷಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಏಕಕಾಲಕ್ಕೆ 500ಕ್ಕೂ ಹೆಚ್ಚು ವಾಹನಗಳನ್ನು ಪಾರ್ಕ್ ಮಾಡಬಹುದಾದ ಸುಸಜ್ಜಿತ ಬಹುಮಹಡಿ ಪಾರ್ಕಿಂಗ್ ವ್ಯವಸ್ಥೆ ಇದೆ. ಕ್ರೀಡಾ ಪ್ರೇಮಿಗಳಿಗಾಗಿ ವಾಣಿಜ್ಯ ಮತ್ತು ಚಿಲ್ಲರೆ ವ್ಯಾಪಾರ ಮಳಿಗೆಗಳು, ಕ್ರೀಡಾ ಪರಿಕರಗಳ ಅಂಗಡಿ ಮತ್ತು ವಿಶಾಲವಾದ ಉಪಹಾರ ಗೃಹಗಳು ಇವೆ. ಆಟಗಾರರು, ಕೋಚ್‌ಗಳು ಹಾಗೂ ಕ್ರೀಡಾ ಸಿಬ್ಬಂದಿ ವಾಸ್ತವ್ಯ ಹೂಡಲು ಹೈಟೆಕ್ ವಸತಿ ಗೃಹಗಳು. ಗಣ್ಯರ ತುರ್ತು ಆಗಮನಕ್ಕಾಗಿ ಹೆಲಿಪ್ಯಾಡ್, ಸಾರ್ವಜನಿಕ ಪ್ಲಾಜಾ ಮತ್ತು ಸುತ್ತಲೂ ಆಕರ್ಷಕ ಹಸಿರು ವಲಯ ಇರಲಿದೆ.

Leave a Comment

Your email address will not be published. Required fields are marked *