ಕರ್ನಾಟಕ ರಣಜಿ ತಂಡದ ಆಟಗಾರ ಅಕ್ಷಯ್ ಎಸ್.ಎಲ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: 2015ರ ಕರ್ನಾಟಕ ರಣಜಿ ತಂಡದ ಆಟಗಾರ ಶಿವಮೊಗ್ಗ ಮೂಲದ ಅಕ್ಷಯ್ ಎಸ್‌.ಎಲ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ದುರ್ಗಿಗುಡಿ ಕ್ರಿಕೆಟ್ ಕ್ಲಬ್‌ನ ಆಟಗಾರರಾಗಿದ್ದ ಅಕ್ಷಯ್ ಮಧ್ಯಮ ವೇಗದ ಬೌಲರ್ ಹಾಗೂ ಉತ್ತಮ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದರು. ಸದ್ಯ ಕರ್ನಾಟಕ ಅಂಡರ್-19 ಕ್ರಿಕೆಟ್ ತಂಡದ ಕೋಚ್ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದರು.

. Ad Widget . Ad Widget . Ad Widget .

KSCA ಲೀಗ್ ಪಂದ್ಯಾವಳಿ ವೇಳೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಎಸ್ ಎಲ್ ಎಸ್ ಕ್ರೀಡಾಂಗಣದಲ್ಲಿ KSCA nassur memorial shield ಏಕದಿನ ಲೀಗ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

KSCA 3rd ಡಿವಿಸನ್ ಲೀಗ್ ಪಂದ್ಯವಾಡುತ್ತಿದ್ದಾಗ ಅಕ್ಷಯ್ ಅವರಿಗೆ ಹಠಾತ್ ಹೃದಯಾಘಾತ ಸಂಭವಿಸಿದೆ. ನಾಲ್ಕು ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ ಎಂದು ಅಕ್ಷಯ್ ಹೊರಬಂದಿದ್ದರು. ಬಳಿಕ ನೀರು ಕುಡಿಯುತ್ತಿದ್ದಂತೆಯೇ ಸ್ಥಳದಲ್ಲಿಯೇ ಕುಸಿದುಬಿದ್ದಿದ್ದರು.

ಇಂದು ನಡೆಯುತ್ತಿದ್ದ ಪಂದ್ಯದಲ್ಲಿ ಅಕ್ಷಯ್ 4 ಓವರ್ ಬೌಲಿಂಗ್ ಮಾಡಿ ಕೇವಲ 19 ರನ್ ನೀಡಿ ಒಂದು ವಿಕೆಟ್ ಕಬಳಿಸಿದ್ದರು. ಇನ್ನು ಅಕ್ಷಯ್ ಕರ್ನಾಟಕ ಪರ 6 ರಣಜಿ, 3 ಏಕದಿನ ಪಂದ್ಯಗಳನ್ನಾಡಿದ್ದರು.

ತಕ್ಷಣವೇ ಅಕ್ಷಯ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದೀಗ ಅವಲಹಳ್ಳಿಯ ಈಸ್ಟ್ ಪಾಯಿಂಟ್‌ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಅಕ್ಷಯ್ ನಿಧನಕ್ಕೆ ಕರ್ನಾಟಕ ಕ್ರಿಕೆಟ್ ವಲಯ ಕಂಬನಿ ಮಿಡಿದಿದೆ.

Leave a Comment

Your email address will not be published. Required fields are marked *