ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು  ಬೆನ್ನಟ್ಟಿದ ಕಾಡನೆ 

ಮಡಿಕೇರಿ: ಕಾಡಾನೆಗಳ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ.

Ad Widget ... ..

ಗುಹ್ಯ ಗ್ರಾಮ ಹಾಗೂ ನೆಲ್ಲಿ ಹುದಿಕೇರಿ ಗ್ರಾಮದ ಬೆಟ್ಟದ ಕಾಡು ಸುತ್ತಮುತ್ತಲಿನ ಪ್ರದೇಶದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟು ಹಾವಳಿ ನಡೆಸುತ್ತಿದ್ದವು. ಅವುಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಗುಂಪಿನಲ್ಲಿದ್ದ ಕಾಡಾನೆಗಳು ಕೋಪಗೊಂಡು ಕಾರ್ಯಾಚರಣೆ ತಂಡವನ್ನು ಬೆನ್ನಟ್ಟಿವೆ. ಕಾಫಿ ತೋಟದ ತುಂಬೆಲ್ಲ ಅಟ್ಟಾಡಿಸಿವೆ.

Ad Widget

ಕಾಡಾನೆಗಳಿಂದ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆನೆ ಕಾರ್ಯಪಡೆ ಸಿಬ್ಬಂದಿ ಕಾಫಿ ತೋಟದೊಳಗೆ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಆದರೆ ಗುಂಪಿನಲ್ಲಿದ್ದ ಬಹುತೇಕ ಕಾಡಾನೆಗಳು ಕಾಫಿ ತೋಟಗಳಿಂದ ಹೊರಕ್ಕೆ ಹೋಗಲು ಹಿಂದೇಟು ಹಾಕಿದವು ಎಂದು ಸಿಬ್ಬಂದಿ ತಿಳಿಸಿದರು.

Leave a Comment

Your email address will not be published. Required fields are marked *