ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು


ಸಮಗ್ರ ನ್ಯೂಸ್ : ದುಬೈನಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ.

. Ad Widget . Ad Widget . Ad Widget .


ಮೃತರನ್ನು ಕಿನ್ನಿಗೋಳಿಯ ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .


ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೆಲವು ತಿಂಗಳುಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

Leave a Comment

Your email address will not be published. Required fields are marked *