Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ 

ಸಮಗ್ರ ನ್ಯೂಸ್ : ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮೇ. 27ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ.

. Ad Widget . Ad Widget . Ad Widget .

ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .


ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮತ್ತೊಂದು ಅಪಘಾತ ಪ್ರಕರಣದ ಪರಿಶೀಲನೆಗಾಗಿ ಪೊಲೀಸ್ ಸಿಬ್ಬಂದಿ ಮಣ್ಣಗುಡ್ಡದ ಗೋದಾಮು ಸಮೀಪ ತೆರಳಿದ್ದರು. ಈ ವೇಳೆ ಬಲ್ಲಾಲ್‌ಬಾಗ್ ಕಡೆಯಿಂದ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ KA-19-MP-9623 ಸಂಖ್ಯೆಯ ಕಾರು ರಸ್ತೆಬದಿಯಲ್ಲಿ ನಿಂತಿದ್ದ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಅವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಕ್ಷಣದಲ್ಲಿ ಸ್ಥಳದಲ್ಲಿದ್ದ ಕೆಲವರು ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಗಳೂರು ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 33/2026ರಡಿ ಬಿಎನ್‌ಎಸ್ ಸೆಕ್ಷನ್ 281 ಹಾಗೂ 125(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *