ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ

ಸಮಗ್ರ ನ್ಯೂಸ್: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಅದ್ಯಕ್ಷರು ಯಾರಾಗುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಇಂದು ಕಾಂಗ್ರೆಸ್ ಹೈಕಮಾಂಡ್‌ನಿಂದಲೇ ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಅವರ ಆಯ್ಕೆ ಆಗಿದೆ.

. Ad Widget . Ad Widget . Ad Widget .

ಕಾಂಗ್ರೆಸ್ ವರಿಷ್ಠರಿಂದಲೇ ಇಂದು ಬುಧವಾರ ಬೆಳಗ್ಗೆ ದೂರವಾಣಿ ಕರೆ ಬಂದಿದೆ. ನಾಯಕರೊಂದಿಗೆ ಮಾತನಾಡಿದ ಬಿಕೆ. ಹರಿಪ್ರಸಾದ್ ಅವರು ವರಿಷ್ಠ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೊಸ ಜವಾಬ್ದಾರಿ ನಿರ್ವಹಣೆಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಅವರ ಪದಗ್ರಹಣ ದಿನವೇ ಅವರು ನಿರ್ವಹಿಸಿದ್ದ ಕೆಪಿಸಿಸಿ ಸ್ಥಾನಕ್ಕೆ ಹೊಸ ಸಾರಥಿಯ ನೇಮಕವಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ರಾಹುಲ್ ಗಾಂಧಿ, ಸೋನಿಯಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಬಿಕೆ ಹರಿಪ್ರಸಾದ್ ಅವರಿಗೆ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಣೆ ನೀಡಿದರು. ಹೈಕಮಾಂಡ್‌ನ ಈ ನಿರ್ಧಾರವು ಇತ್ತ ಕೆಪಿಸಿಸಿ ಅಧ್ಯಕ್ಷಗಿರಿಗೆ ಏರುವ ಕನಸು ಕಂಡಿದ್ದ ಉತ್ತರ ಕರ್ನಾಟಕದ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಆಘಾತ ನೀಡಿದಂತಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಲು ಒಂದಷ್ಟು ಕಸರತ್ತು ನಡೆಸಿದ್ದರು. ಈ ಸಂಬಂಧ ದೆಹಲಿ ಮಟ್ಟದಲ್ಲಿ ಲಾಭಿ ನಡೆಸಿದ್ದರು. ಆದರೆ ಆ ಹುದ್ದೆ ಬಿಕೆ ಹರಿಪ್ರಸಾದ್ ಅವರ ಪಾಲಾಗುತ್ತಿದ್ದಂತೆ ಅವರ ಕನಸಿಗೆ ತಣ್ಣೀರೆರಚಿದಂತಾಗಿದೆ. ಹೀಗಾಗಿ ಸತೀಶ್ ಜಾರಕಿಹೊಳಿ ಅವರ ಮುಂದಿನ ನಡೆ ಬಗ್ಗೆ ಕೂತೂಹಲ ಸೃಷ್ಟಿಯಾಗಿದೆ.

Leave a Comment

Your email address will not be published. Required fields are marked *