ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಘೋಷಣೆ| ಅರ್ಜಿ ಸಲ್ಲಿಸಲು ಏನ್ ಮಾಡ್ಬೇಕು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿಕೆ ಶಿವಕುಮಾರ್ ವಿದ್ಯಾರ್ಥಿ ಸಮೂಹಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಮುಖ್ಯಮಂತ್ರಿಗಳು ಮಹತ್ತರ ಘೋಷಣೆ ಮಾಡಿದ್ದಾರೆ.

Ad Widget ... .. Ad Widget .

ಈ ಹಿನ್ನೆಲೆಯಲ್ಲಿ ಬೆಂಗಳೂರು
ಮಹಾನಗರ ಸಾರಿಗೆ ಸಂಸ್ಥೆ (BMTC) ಹಾಗೂ KSRTCಯಲ್ಲಿ ಸದ್ಯ ಪಾಸ್ ಪಡೆಯಲು ಇರುವ ನಿಯಮಗಳು, ಪ್ರಸ್ತುತ ಇರುವ ದರ ಪಟ್ಟಿ ಹಾಗೂ ಇನ್ನು ಮುಂದೆ ಉಚಿತ ಪಾಸ್ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Ad Widget

ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈಗಿರುವ ನಿಯಮಗಳ ಪ್ರಕಾರವೇ ಅರ್ಜಿ ಸಲ್ಲಿಸಬೇಕು. ಆದರೆ, ಮುಖ್ಯ ಬದಲಾವಣೆ ಎಂದರೆ ವಿದ್ಯಾರ್ಥಿಗಳು ಇನ್ನು ಮುಂದೆ ಪಾಸ್‌ಗಾಗಿ ಯಾವುದೇ ಹಣವನ್ನು ಪಾವತಿ ಮಾಡಬೇಕಿರುವುದಿಲ್ಲ.

ವಿದ್ಯಾರ್ಥಿಗಳು ಯಾವುದೇ ಸೈಬರ್ ಸೆಂಟರ್, ಬೆಂಗಳೂರು ಒನ್ ಕೇಂದ್ರಗಳು ಅಥವಾ ತಮ್ಮ ಮೊಬೈಲ್ ಮೂಲಕ ‘ಸೇವಾಸಿಂಧು’ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಸಲು ಫಾರ್ಮ್‌ಗೆ 10 ರೂ. ಹಾಗೂ ಆನ್‌ಲೈನ್ ಸಲ್ಲಿಕೆಗಾಗಿ 100 ರೂ. ಸೇವಾ ಶುಲ್ಕ ಇರಲಿದೆ.

ವಿದ್ಯಾರ್ಥಿಯ ಆಧಾರ್ ಕಾರ್ಡ್, ಪ್ರಸ್ತುತ ಸಾಲಿನ ಕಾಲೇಜು ಪ್ರವೇಶಾತಿ ರಶೀದಿ (Admission Receipt) ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು ಇರಬೇಕು.

ಆನ್‌ಲೈನ್ ಅಪ್ಲಿಕೇಶನ್ ಹಾಕಿದ ನಂತರ, ವಿದ್ಯಾರ್ಥಿಯು ತಾನು ಓದುತ್ತಿರುವ ವಿದ್ಯಾಸಂಸ್ಥೆಯ ಮುಖ್ಯಸ್ಥರಿಂದ (ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರು) ಸಹಿ ಮತ್ತು ಸೀಲು ಹಾಕಿಸಿಕೊಳ್ಳಬೇಕು.

ಈ ಅರ್ಜಿಯನ್ನು ಬಿಎಂಟಿಸಿ/ಕರಾರಾಸಾನಿ ಪಾಸ್ ವಿಭಾಗದವರು ಪರಿಶೀಲಿಸಿ ಅನುಮೋದನೆ ನೀಡುತ್ತಾರೆ. ಅಪ್ರೂವಲ್ ಆದ ತಕ್ಷಣ ವಿದ್ಯಾರ್ಥಿಯ ಮೊಬೈಲ್‌ಗೆ ಸಂದೇಶ (SMS) ಬರುತ್ತದೆ. ಬಳಿಕ ಹತ್ತಿರದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಅಥವಾ ವಿಭಾಗೀಯ ಅಧಿಕಾರಿಗಳ ಕಚೇರಿ ಸಂಪರ್ಕಿಸಿ ಪಾಸ್ ಪಡೆದುಕೊಳ್ಳಬಹುದು.

ಶಕ್ತಿ ಯೋಜನೆ ಅಡಿಯಲ್ಲಿ ಈಗಾಗಲೇ ರಾಜ್ಯದ ಎಲ್ಲಾ ಮಹಿಳಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಇರುವುದರಿಂದ ಅವರು ಪ್ರತ್ಯೇಕವಾಗಿ ಪಾಸ್ ಪಡೆಯುವ ಅಗತ್ಯವಿಲ್ಲ. ಕೇವಲ ವಿದ್ಯಾರ್ಥಿಗಳು (ಗಂಡು ಮಕ್ಕಳು) ಮಾತ್ರ ಮುಖ್ಯಮಂತ್ರಿಗಳು ಘೋಷಿಸಿರುವ ಈ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬೇಕಾಗಿದೆ.

ಮುಖ್ಯಮಂತ್ರಿಗಳ ಉಚಿತ ಪಾಸ್ ಆದೇಶ ಸಂಪೂರ್ಣ ಜಾರಿಗೆ ಬರುವ ಮುನ್ನ ಬಿಎಂಟಿಸಿಯಲ್ಲಿ ಚಾಲ್ತಿಯಲ್ಲಿದ್ದ ದರ ಪಟ್ಟಿ ಹೀಗಿದೆ (ಇನ್ನು ಮುಂದೆ ಈ ಪಾಸಿನ ದರಗಳು ವಿದ್ಯಾರ್ಥಿಗಳಿಗೆ ಸಂಪೂರ್ಣ ಮನ್ನಾ ಆಗಲಿವೆ):

ತರಗತಿ / ಕೋರ್ಸ್ ವಿವರ – ಹಳೆಯ ಪಾಸಿನ ದರ – ಸೇವಾ ಶುಲ್ಕ – ಒಟ್ಟು ಮೊತ್ತ (ಈಗ ಮನ್ನಾ)

1 ರಿಂದ 7ನೇ ತರಗತಿ – ಉಚಿತ – ₹150 – ₹150
8 ರಿಂದ 10ನೇ ತರಗತಿ (ಬಾಲಕರಿಗೆ) – ₹600 – ₹150 – ₹750
11 ಮತ್ತು 12ನೇ ತರಗತಿ (ಪಿಯುಸಿ) – ₹900 – ₹150 – ₹1,050
ಪದವಿ ಮತ್ತು ಸ್ನಾತಕೋತ್ತರ – ₹1,150 – ₹150 – ₹1,300
ತಾಂತ್ರಿಕ ಮತ್ತು ವೈದ್ಯಕೀಯ – ₹1,680 – ₹150 ₹1,830
ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವಿದ್ಯಾರ್ಥಿಗಳಿಗೆ ಈ ಹಿಂದೆಯೂ ಸಹ ಪಾಸಿನ ದರ ಉಚಿತವಾಗಿದ್ದು, ಕೇವಲ 150 ರೂ. ಸೇವಾ ಶುಲ್ಕ ಮಾತ್ರ ಇತ್ತು.

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಈ ಐತಿಹಾಸಿಕ ‘ಉಚಿತ ಬಸ್ ಪಾಸ್’ ಘೋಷಣೆಯಿಂದಾಗಿ ಇನ್ನು ಮುಂದೆ ವಿದ್ಯಾರ್ಥಿಗಳು ಮೇಲ್ಕಂಡ ಯಾವುದೇ ಶುಲ್ಕವನ್ನು ಭರಿಸಬೇಕಾಗಿಲ್ಲ. ಕೇವಲ ಆನ್‌ಲೈನ್‌ನಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಿ ಉಚಿತವಾಗಿ ಪಾಸ್ ಪಡೆದು ಪ್ರಯಾಣಿಸಬಹುದಾಗಿದೆ.

Leave a Comment

Your email address will not be published. Required fields are marked *