ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

ಸಮಗ್ರ ನ್ಯೂಸ್: ನೂತನ ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Ad Widget ... .. Ad Widget .

ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯಾದ ಕೇವಲ 48 ಗಂಟೆಗಳಲ್ಲಿಯೇ ಸಚಿವರೊಬ್ಬರು ಪದತ್ಯಾಗ ಮಾಡಿದ್ದು, ನಗರಾಭಿವೃದ್ಧಿ ಖಾತೆ ಸಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ದಿ ರಾಜೀನಾಮೆ ನೀಡಿದ್ದಾರೆ.

Ad Widget

ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಕೊನೇ ಕ್ಷಣದವರೆಗೂ ಮನವೊಲಿಸಲು ಯತ್ನಿಸಿದರೂ ಯಾರ ಮಾತನ್ನೂ ಕೇಳದ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ರಾಮಲಿಂಗಾರೆಡ್ಡಿ ಅವರಿಗೆ ನೂತನ ಸರ್ಕಾರದಲ್ಲಿ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿತ್ತು. ಆದರೆ ರಾಮಲಿಂಗಾ ರೆಡ್ಡಿ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಬೇಕೆಂದು ಪಟ್ಟು ಹಿಡಿದಿದ್ದರು. ತನಗೆ ಜಲಸಂಪನ್ಮೂಲ ಖಾತೆ ಅರ್ಥಮಾಡಿಕೊಳ್ಳಲು ೬ ತಿಂಗಳು ಬೇಕು. ಈ ಖಾತೆ ನನಗೆ ಬೇಡ ನಗರಾಭಿವೃದ್ಧಿ ಖಾತೆ ನೀಡುವಂತೆ ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಿದ್ದರು. ಆದರೆ ನಗರಾಭಿವೃದ್ಧಿ ಖಾತೆ ಕೃಷ್ಣಭೈರೇಗೌಡ ಪಾಲಾಗಿದೆ.

2023 ರಲ್ಲಿ ಡಿ.ಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದಾಗ, ರಾಮಲಿಂಗಾ ರೆಡ್ಡಿಗೆ ಸಾರಿಗೆ ಇಲಾಖೆ ನೀಡಿದ ಸಂದರ್ಭದಲ್ಲಿ, ‘ನಾನು ಮುಖ್ಯಮಂತ್ರಿಯಾದಾಗ ಬೆಂಗಳೂರು ನಗರಾಭಿವೃದ್ಧಿ ಖಾತೆ ನನ್ನ ಬಳಿ ಇರುತ್ತದೆ, ಅದನ್ನೇ ನಿಮಗೆ ನೀಡುತ್ತೇನೆ’ ಎಂದು ಭರವಸೆ ನೀಡಿದ್ದರು. ಈ ಭರವಸೆಯನ್ನು ಉಳಿಸಿಕೊಳ್ಳುವಂತೆ ರಾಮಲಿಂಗಾ ರೆಡ್ಡಿ ಡಿ.ಕೆ ಶಿವಕುಮಾರ್ ಅವರಿಗೆ ಒತ್ತಾಯಿಸಿದ್ದರು. ಆದಾಗ್ಯೂ ನಗರಾಭಿವೃದ್ಧಿ ಖಾತೆ ನೀಡಲು ಸಿಎಂ ನಿರಾಕರಿಸಿದ್ದಾರೆ ಎನ್ನಲಾಗಿದೆ.

ಇದರಿಂದ ತೀವ್ರ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಮನವೊಲಿಸಲು ಡಿ.ಕೆ ಶಿವಕುಮಾರ್ ಮಾಡಿದ ಪ್ರಯತ್ನ ವಿಫಲಾಗಿದೆ. ಹೈಕಮಾಂಡ್ ನಾಯಕರಾದ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರವೂ ಹೈಕಮಾಂಡ್‌ನಿಂದ ಅನುಮೋದನೆ ದೊರೆಯದ ಕಾರಣ, ಡಿ.ಕೆ ಶಿವಕುಮಾರ್ ಪ್ರಯತ್ನ ಫಲಕಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನನಗೆ ಆತ್ಮಸಾಕ್ಷಿ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಇದರಿಂದ ಬೇಸರವಾಗಿದೆ. ಹಾಗಾಗಿ ನನಗೆ ನಗರಾಭಿವೃದ್ಧಿ ಖಾತೆ ಬೇಡ ನಾನು ರಾಜೀನಾಮೆ ನೀಡುತ್ತಿದ್ದೇನೆ. ಕಾಂಗ್ರೆಸ್ ನಲ್ಲಿ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *