ಚುರುಕುಗೊಂಡ ಮುಂಗಾರು| ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... .. Ad Widget .

ಬೆಂಗಳೂರಿನ ಹವಾಮಾನ ಕೇಂದ್ರ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಜೋರಾಗಲಿದ್ದು, ಜೂ 8ರಿಂದ ಎರಡು ದಿನಗಳ ಕಾಲ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಎಚ್ಚರಿಕೆಯನ್ನು ನೀಡಿದೆ. 204.5 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

Ad Widget

ಇನ್ನು ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಮುಂದುವರಿಯಲಿದೆ.

ಉತ್ತರ ಒಳನಾಡಿನ ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ನಾಲ್ಕು ದಿನ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *