ದೇಶದಲ್ಲಿ ಪೆಟ್ರೋಲ್ ಇಲ್ಲ, ವಿದೇಶದಲ್ಲಿ ಮರ್ಯಾದೆ ಇಲ್ಲ, ಆದರೂ ಬಿಜೆಪಿಗರ ತಿರ್ಪೆ ಶೋಕಿಗೇನು ಕಮ್ಮಿ ಇಲ್ಲ – ತಂಗಡಗಿ

ಸಮಗ್ರ ನ್ಯೂಸ್: ದೇಶದಲ್ಲಿ ಪೆಟ್ರೋಲ್‌ ಇಲ್ಲ,‌ ವಿದೇಶದಲ್ಲಿ‌ ಮರ್ಯಾದೆ ಇಲ್ಲ, ರೂಪಾಯಿಗೆ ಬೆಲೆ ಇಲ್ಲ.‌ ಮೀಡಿಯಾದ ಮುಂದೆ ಬರಲು ಧಮ್ಮಿಲ್ಲ. ಆದರೂ ಬಿಜೆಪಿ ನಾಯಕರ ತಿರ್ಪೆ ಶೋಕಿಗೆ ಕಮ್ಮಿ ಇಲ್ಲ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗರ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

Ad Widget ... .. Ad Widget .

ಭಾನುವಾರ ಕಾರಟಗಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆ ಎದುರಾಗಿದ್ದು, ರೈತರ ಪರಿಸ್ಥಿತಿ ಸಂಕಷ್ಟದಲ್ಲಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಆದರೆ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.

Ad Widget

ಹಿಂದೆ ಅಡುಗೆ ಅನಿಲದ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಈಗ ಕಾಣಿಸುತ್ತಿಲ್ಲ. ಜನರ ಸಮಸ್ಯೆಗಳ ಬಗ್ಗೆ ಮಾತನಾಡದೆ ಮೌನವಾಗಿದ್ದಾರೆ ಎಂದು ಆರೋಪಿಸಿದರು.

ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ವ್ಯಕ್ತಪಡಿಸಿದ್ದ ಆತಂಕವನ್ನು ಬಿಜೆಪಿ ನಾಯಕರು ಟೀಕಿಸಿದ್ದರು. ಆದರೆ ಈಗಿನ ಪರಿಸ್ಥಿತಿಗೆ ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದು ಸವಾಲು ಹಾಕಿದರು.

Leave a Comment

Your email address will not be published. Required fields are marked *