ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿಬಸ್| ಸೀಮಂತ ಮುಗಿಸಿ ಮರಳುತ್ತಿದ್ದವರ ಪೈಕಿ ಓರ್ವ ಸಾವು, ಎಂಟು ಮಂದಿ ಜಖಂ

ಸಮಗ್ರ ನ್ಯೂಸ್: ಬೆಳ್ತಂಗಡಿಯಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿ ಸಂಭವಿಸಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಮೃತ ದುರ್ದೈವಿಯನ್ನು ಮಂಗಳೂರು ಮೂಲದ ವಿಕಾಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇತರ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು ಮೂಲದ ವಿಕಾಶ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ ಕಾರ್ಯಕ್ರಮಕ್ಕೆ ತೆರಳಿದ್ದರು. ಸಂಜೆ ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಮಿನಿ ಬಸ್ ನಲ್ಲಿ ವಾಪಸ್ಸಾಗುತ್ತಿದ್ದರು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಪುದು ಗ್ರಾಮದ ಸಮೀಪ ಬರುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಬಲವಾಗಿ ಡಿಕ್ಕಿ ಹೊಡೆದು ರಸ್ತೆಯ ಮಧ್ಯದಲ್ಲೇ ಪಲ್ಟಿಯಾಗಿದೆ.

ಅಪಘಾತದ ರಭಸಕ್ಕೆ ಒಟ್ಟು 9 ಮಂದಿ ಗಾಯಗೊಂಡಿದ್ದು, ಈ ಪೈಕಿ ವಿಕಾಶ್ ಅವರ ಸ್ಥಿತಿ ಗಂಭೀರವಾಗಿತ್ತು. ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ರಕ್ತಸ್ರಾವವಾಗಿದ್ದರಿಂದ ವಿಕಾಶ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *