ಪಿಒಕೆಯಲ್ಲಿ ಪಾಕಿಸ್ತಾನದ ಹೆಲಿಕಾಪ್ಟರ್ ಪತನ| 21 ಸೈನಿಕರು ದುರ್ಮರಣ

ಸಮಗ್ರ ನ್ಯೂಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಬುಧವಾರ ಭೀಕರ ದುರಂತವೊಂದು ಸಂಭವಿಸಿದೆ. ಪಾಕಿಸ್ತಾನ ಸೇನಾ ವಿಮಾನಯಾನ ಇಲಾಖೆಗೆ ಸೇರಿದ ಎಂಐ-17 (Mi-17) ಹೆಲಿಕಾಪ್ಟರ್ ಮುಜಾಫರಾಬಾದ್ ಬಳಿ ಪತನಗೊಂಡಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ 21 ಸೇನಾ ಸಿಬ್ಬಂದಿ ದುರ್ಮರಣಕ್ಕೀಡಾಗಿದ್ದಾರೆ.

Ad Widget ... .. Ad Widget .

ಪ್ರಾಥಮಿಕ ವರದಿಗಳ ಪ್ರಕಾರ, ಪಿಒಕೆಯ ನೀಲಂ ಕಣಿವೆ ಸೆಕ್ಟರ್‌ಗೆ ಹೆಚ್ಚುವರಿ ಸೈನಿಕರನ್ನು ಸಾಗಿಸುತ್ತಿದ್ದ ವೇಳೆ ಈ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಟೇಕ್‌ ಆಫ್‌ ಆಗುವ ಸಂದರ್ಭದಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ವೇಳೆ ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ತೀವ್ರ ಪ್ರಯತ್ನ ನಡೆಸಿದರಾದರೂ, ನಿಯಂತ್ರಣ ಸಿಗದೆ ಹೆಲಿಕಾಪ್ಟರ್ ವೇಗವಾಗಿ ನೆಲಕ್ಕೆ ಅಪ್ಪಳಿಸಿ ಈ ಭೀಕರ ದುರಂತ ಸಂಭವಿಸಿದೆ.

Ad Widget

ಹೆಲಿಕಾಪ್ಟರ್ ಸಂಪೂರ್ಣವಾಗಿ ಪತನಗೊಂಡಿದ್ದು, ಅದರಲ್ಲಿದ್ದ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಭದ್ರತಾ ಪಡೆಯ ಸೈನಿಕರು ಸೇರಿದಂತೆ ಒಟ್ಟು 21 ಸಿಬ್ಬಂದಿಯಲ್ಲಿ ಯಾರೊಬ್ಬರೂ ಬದುಕುಳಿದಿಲ್ಲ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಪಾಕಿಸ್ತಾನದ ಇಂಟರ್-ಸರ್ವಿಸಸ್ ಪಬ್ಲಿಕ್ ರಿಲೇಶನ್ಸ್ (ISPR), “ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ ಸಿಬ್ಬಂದಿ ವೀರಮರಣ ಅಪ್ಪಿದ್ದಾರೆ. ಯಾರೂ ಬದುಕುಳಿದಿಲ್ಲ” ಎಂದು ಸ್ಪಷ್ಟಪಡಿಸಿದೆ.

ಈ ದುರಂತದ ಬೆನ್ನಲ್ಲೇ ಪಾಕಿಸ್ತಾನದ ಚೀಫ್ ಆಫ್ ಡಿಫೆನ್ಸ್ ಫೋರ್ಸಸ್ (CDF) ಹಾಗೂ ಆರ್ಮಿ ಚೀಫ್ ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್ ಮತ್ತು ಸೇನೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದಕ್ಕೆ ತೀವ್ರ ದುಃಖವಾಗಿದ್ದು, ಮೃತರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳನ್ನು ಸೂಚಿಸುತ್ತೇವೆ” ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ. ಸದ್ಯ ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

Leave a Comment

Your email address will not be published. Required fields are marked *