ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ

ಸಮಗ್ರ ನ್ಯೂಸ್: ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ.

Ad Widget ... .. Ad Widget .

ದು. ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು ಪ್ರತಿಭಟನೆ, ಮನವಿ ಹಾಗೂ ಬೇಡಿಕೆಗಳನ್ನು ಸಲ್ಲಿಸುವ ಜನರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರತ್ಯೇಕ ವ್ಯವಸ್ಥೆ ಅಗತ್ಯವಿದೆ ಎಂದು ಅವರು ಹೇಳಿದರು.

Ad Widget

ಪ್ರತಿದಿನ ಹಲವಾರು ಸಂಘಟನೆಗಳು ಹಾಗೂ ಸಾರ್ವಜನಿಕರು ತಮ್ಮ ಬೇಡಿಕೆಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಬರುತ್ತಾರೆ. ಅವರ ಸಮಸ್ಯೆಗಳು ಕಾನೂನುಬದ್ಧವೇ ಅಥವಾ ಅಲ್ಲವೇ ಎಂಬುದನ್ನು ಪರಿಶೀಲಿಸಿ, ಸಂಬಂಧಿತ ಅಧಿಕಾರಿಗಳ ಮೂಲಕ ಪರಿಹಾರ ಕಂಡುಕೊಳ್ಳಲು ‘ಪ್ರಜಾಸೇವೆ’ ಇಲಾಖೆ ನೆರವಾಗಲಿದೆ ಎಂದು ಸಿಎಂ ತಿಳಿಸಿದರು.

ಇದೇ ವೇಳೆ ಅಧಿಕಾರಿಗಳಿಗೆ 15 ದಿನಗಳೊಳಗೆ ತಮ್ಮ ಇಲಾಖೆಗಳ ಕಾರ್ಯಯೋಜನೆ ಸಿದ್ಧಪಡಿಸುವಂತೆ ಸೂಚಿಸಿರುವ ಸಿಎಂ, ಯಾವುದೇ ರಾಜಕೀಯ ಅಥವಾ ಇತರೆ ಒತ್ತಡಗಳಿಗೆ ಮಣಿಯದೆ ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಸರ್ಕಾರ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಸ್ಪಂದಿಸಿ ನ್ಯಾಯ ದೊರಕಿಸಲು ಈ ಪ್ರಜಾಸೇವೆ ಇಲಾಖೆಯನ್ನು ರಚಿಸಲು ನಿರ್ಧರಿಸಿದ್ದು, ಈ ಹೊಸ ಇಲಾಖೆಯಲ್ಲಿ ಪ್ರತ್ಯೇಕವಾಗಿ ಸಚಿವರು ಹಾಗೂ IAS ಅಧಿಕಾರಿಗಳು ಇರಲಿದ್ದಾರೆ. ಸಚಿವರು ಎಲ್ಲಾ ೨೨೪ ಕ್ಷೇತ್ರಗಳಿಗೂ ಹೋಗಿ ಶಾಸಕರ ಜತೆ ಸಭೆ ನಡೆಸಿ ಜನರ ಅಹವಾಲುಗಳನ್ನು ಆಲಿಸಿ ನ್ಯಾಯ ದೊರಕಿಸುವ ಕೆಲಸ ಮಾಡಲಿದ್ದಾರೆ. ವಾರಕ್ಕೊಮ್ಮೆ ಕಡ್ಡಾಯವಾಗಿ ಶಾಸಕರ ಜತೆಗೂಡಿ ಜನಸ್ಪಂದನ ಸಭೆ ನಡೆಸಿ ಅಲ್ಲಿನ ಅಭಿಪ್ರಾಯಗಳನ್ನು ನಮಗೆ ತಲಪಿಸುತ್ತಾರೆ ಎಂದರು.

ಜನರ ಸಮಸ್ಯೆಗಳಿಗೆ ವೇಗವಾಗಿ ಸ್ಪಂದಿಸಿ, ಆಡಳಿತವನ್ನು ಇನ್ನಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಪ್ರಜಾಸೇವೆ’ ಇಲಾಖೆಯನ್ನು ಆರಂಭಿಸುತ್ತಿದೆ. ಈ ಹೊಸ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ದೂರುಗಳು ಮತ್ತು ಬೇಡಿಕೆಗಳಿಗೆ ಒಂದೇ ವೇದಿಕೆಯಲ್ಲಿ ಪರಿಹಾರ ದೊರೆಯುವ ನಿರೀಕ್ಷೆ ಮೂಡಿದೆ.

Leave a Comment

Your email address will not be published. Required fields are marked *