ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು  (Weather) ಹಾಗೂ ಬಲವಾದ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... .. Ad Widget .

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರವಾದ ಮಳೆಯಾಗಬಹುದು.

Ad Widget

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ (30-40 kmph) ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ.

Leave a Comment

Your email address will not be published. Required fields are marked *