ಮಂಡ್ಯದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ಪ್ರವಾಸಿಗರು ಸಾವು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ನಡೆದ ಘೋರ ದುರಂತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಈಜಲು ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

Ad Widget ... .. Ad Widget .

ನದಿಯ ಆಳ ಮತ್ತು ಸುಳಿಯ ಅರಿವಿಲ್ಲದೆ ಈಜಲು ಮುಂದಾದ ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯು ಮೃತ ಯುವಕರ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ.

Ad Widget

ಮಾಹಿತಿಯಂತೆ, ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಈ ನಾಲ್ವರು ಯುವಕರು ಮುತ್ತತ್ತಿ ಪ್ರದೇಶದಲ್ಲಿ ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದರು. ಆದರೆ ನೀರಿನ ಆಳ ಹಾಗೂ ಪ್ರವಾಹದ ತೀವ್ರತೆಯನ್ನು ಅಂದಾಜಿಸಲು ಸಾಧ್ಯವಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಲಗೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಶೋಧ ಕಾರ್ಯ ಮುಂದುವರಿದಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ. ಈ ಭಾಗದಲ್ಲಿ ಕಾವೇರಿ ನದಿ ಪ್ರವಾಸಿ ಸ್ಥಳಗಳಲ್ಲಿ ನೀರಿನ ಅಪಾಯ ಹೆಚ್ಚಿರುವುದರಿಂದ ಎಚ್ಚರಿಕೆಯಿಂದ ವರ್ತಿಸಲು ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Comment

Your email address will not be published. Required fields are marked *