ರೆಡ್ ಅಲರ್ಟ್ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಜು.2ರಂದು ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ನಾಳೆ ಜಿಲ್ಲೆಯಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

Ad Widget ... .. Ad Widget .

ಜಿಲ್ಲಾಧಿಕಾರಿಗಳ ಆದೇಶದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (PU) ಸೇರಿದಂತೆ ಎಲ್ಲ ಕಾಲೇಜುಗಳಿಗೆ ನಾಳೆ ರಜೆ ಇರಲಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ.

Ad Widget

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಕರಾವಳಿ ತೀರದಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ಹಾಗೂ ನದಿ ತೀರದ ಪ್ರದೇಶಗಳಲ್ಲಿ ಗಾಳಿಯ ವೇಗವೂ ಹೆಚ್ಚಿರಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ತುರ್ತು ಪರಿಸ್ಥಿತಿ ಎದುರಾದಲ್ಲಿ ಸಾರ್ವಜನಿಕರು ಸ್ಥಳೀಯ ಆಡಳಿತ ಅಥವಾ ಸಹಾಯವಾಣಿಯನ್ನು ಸಂಪರ್ಕಿಸಲು ಕೋರಲಾಗಿದೆ.

Leave a Comment

Your email address will not be published. Required fields are marked *