ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ಜು.3ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಹವಮಾನ ಇಲಾಖೆ ನಾಳೆ ಅರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜುಲೈ 3ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget .

ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 03.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

Ad Widget . Ad Widget .

ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

Leave a Comment

Your email address will not be published. Required fields are marked *