ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ಜುಲೈ 10 ಅಥವಾ 12ರೊಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

Ad Widget ... .. Ad Widget .

ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಿ, ಸಚಿವ ಸ್ಥಾನ ವಂಚಿತರಾಗಿರುವ ಅತೃಪ್ತ ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

Ad Widget

ಹೈಕಮಾಂಡ್‌ ನಾಯಕರಾದ ರಾಹುಲ್ ಗಾಂಧಿ ಅವರು ತಮ್ಮ ವಿದೇಶಿ ಪ್ರವಾಸ ಮುಗಿಸಿ ರಾಜಧಾನಿ ದೆಹಲಿಗೆ ಮರಳುತ್ತಿರುವ ಬೆನ್ನಲ್ಲೇ, ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟದ ಕಸರತ್ತು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವರಾಗಲಿರುವ ಸಂಭಾವ್ಯರ ಪಟ್ಟಿಯೊಂದಿಗೆ ಜುಲೈ 5ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ದೆಹಲಿ ತಲುಪಲಿದ್ದು, ಜುಲೈ 6 ಮತ್ತು 7ರಂದು ಎಐಸಿಸಿ ವರಿಷ್ಠರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಹೈಕಮಾಂಡ್ ಹಸಿರು ನಿಶಾನೆ ನೀಡಿದ ತಕ್ಷಣವೇ ಅಂದರೆ ಜುಲೈ 10ರಿಂದ 12ರ ಒಳಗೆ ಹೊಸ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *