ಸಮಗ್ರ ನ್ಯೂಸ್: ರಾಜ್ಯದಲ್ಲಿ ಜುಲೈ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಅತಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯೆತ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 50-60 ಕಿ.ಮೀ. ವೇಗದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ಹೊರಡಿಸಲಾಗಿದೆ.
ಜುಲೈ 8ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜುಲೈ 9ರಂದು ಕರಾವಳಿ ಹಾಗೂ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ. ಜುಲೈ 10ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಜುಲೈ 7 ರಿಂದ 11ರವರೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ನದಿ, ಹಳ್ಳ, ತಗ್ಗು ಪ್ರದೇಶ ಹಾಗೂ ಘಟ್ಟ ರಸ್ತೆಗಳಲ್ಲಿ ಎಚ್ಚರಿಕೆಯಿಂದ ಸಂಚರಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








