ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಲಾಗುತ್ತದೆ. ಅಕ್ಟೋಬರ್ 11ರಂದು ಬೆಳಿಗ್ಗೆ 11:50ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆ ನಡೆಯಲಿದೆ. ಶುಭ ಧನುರ್ ಲಗ್ನದಲ್ಲಿ ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರ ಸಂಜೆ 4:10ರಿಂದ 4:35ರ ನಡುವೆ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಲಿದೆ. ಅಕ್ಟೋಬರ್ 21ರಂದು ವಿಶ್ವವಿಖ್ಯಾತ ಜಂಬೂಸವಾರಿ ನಡೆಯಲಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *