ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸೌಜಸ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿ ಅವರ ಆದೇಶವನ್ನು ಎತ್ತಿಹಿಡಿರುವ ಸುಪ್ರೀಂ ಕೋರ್ಟ್ ಮಹೇಶ್ ಶೆಟ್ಟಿ ಅವರ ಮೇಲ್ಮನವಿಯನ್ನು ವಜಾಗೊಳಿಸಿದೆ.

Ad Widget ... .. Ad Widget .

ಪುತ್ತೂರು ಉಪವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಮೂರನೇ ಬಾರಿ ಆದೇಶ ಹೊರಡಿಸಿದ್ದರು. ಇದನ್ನು ರದ್ದುಗೊಳಿಸುವಂತೆ ಕೋರಿ ಮಹೇಶ್ ಶೆಟ್ಟಿ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ನ ಏಕಸದಸ್ಯ ಪೀಠ ಮತ್ತು ವಿಭಾಗೀಯ ಪೀಠಗಳು ತಿಮರೋಡಿ ಅವರ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂಕೋರ್ಟ್ ನ ನ್ಯಾಯಪೀಠವೂ ಪುತ್ತೂರು ಎಸಿ ಅವರು ನೀಡಿರವ ಆದೇಶವನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ಪೀಠಗಳ ತೀರ್ಪನ್ನೇ ಎತ್ತಿ ಹಿಡಿದಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹಿನ್ನಡೆಯಾಗಿದೆ.

Ad Widget

ಏನು ಹೇಳಿತ್ತು ಹೈಕೋರ್ಟ್?:
ಗಡೀಪಾರು ಅದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠವು ಸರ್ಕಾರದ ಮುಂದೆ ಮೇಲ್ಮನವಿ ಸಲ್ಲಿಸುವಂತೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ತಿಮರೋಡಿ ಅವರು ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಕೆಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠವು ಈ ಆದೇಶದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ತಿಳಿಸಿ ಮೇಲ್ಮನವಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು.

ಏನಿದು ಪ್ರಕರಣ?:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆಯಲ್ಲಿ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಿಲ್ಲೆಯಿಂದ ಗಡೀಪಾರು (ನಗರ ಗಡಿಪಾರು) ಶಿಕ್ಷೆ ವಿಧಿಸಿ 2025 ಸೆಪ್ಟೆಂಬರ್ ನಲ್ಲಿ ಮೊದಲ ಬಾರಿ ಆದೇಶ ಹೊರಡಿಸಲಾಗಿತ್ತು. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ (AC) ಸ್ಟೆಲ್ಲಾ ವರ್ಗೀಸ್ ಅವರು ಈ ಮಹತ್ವದ ಆದೇಶವನ್ನು ಜಾರಿಗೊಳಿಸಿದ್ದರು. ತಿಮರೋಡಿ ಅವರನ್ನು ಒಂದು ವರ್ಷದ ಅವಧಿಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಸ್ಥಳಾಂತರಿಸಲು ನಿರ್ದೇಶಿಸಿದ್ದರು. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಸಮಾಜದಲ್ಲಿ ಅಶಾಂತಿ ಸೃಷ್ಟಿ, ಕಾನೂನು ಉಲ್ಲಂಘನೆ ಹಾಗೂ ಸಾರ್ವಜನಿಕ ನೆಮ್ಮದಿಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿತ್ತು ಎಂದು ಮಾಧ್ಯಮಗಳಿಗೆ ಅಧಿಕಾರಿಗಳು ತಿಳಿಸಿದ್ದರು.

Leave a Comment

Your email address will not be published. Required fields are marked *