ಬೆಳ್ತಂಗಡಿ: ಅಪ್ರಾಪ್ತೆಗೆ ಗರ್ಭದಾನ| ಆರೋಪಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಮೂಲದ ಆಟೋ ರಿಕ್ಷಾ ಚಾಲಕ ಶುಭರಾಜ್ (28) ಬಂಧಿತ ಆರೋಪಿ.

Ad Widget ... .. Ad Widget .

ಅಪ್ರಾಪ್ತ ವಿದ್ಯಾರ್ಥಿನಿಯನ್ನು ಈತ ಪರಿಚಯ ಮಾಡಿಕೊಂಡು, ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಅಲ್ಲದೆ ಈ ವಿಷಯವನ್ನು ಯಾರ ಬಳಿಯೂ ಹೇಳದಂತೆ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಬಾಲಕಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯ ತಾಯಿ ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಕಂಡುಬಂದಿದೆ. ಆಘಾತಗೊಂಡ ತಾಯಿ ವಿಚಾರಿಸಿದಾಗ ಆರೋಪಿ ಶುಭರಾಜ್ ಎಸಗಿದ್ದ ಕೃತ್ಯ ಬೆಳಕಿಗೆ ಬಂದಿದೆ.

Ad Widget

ಈ ಕುರಿತು ಬಾಲಕಿಯ ತಾಯಿ ನೀಡಿದ ದೂರಿನನ್ವಯ ಜುಲೈ 18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಂತೆ ತನಿಖೆ ಚುರುಕುಗೊಳಿಸಿದ ಬೆಳ್ತಂಗಡಿ ಪೊಲೀಸರು ಜುಲೈ 19 ರಂದು ಆರೋಪಿ ಶುಭರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು, ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Leave a Comment

Your email address will not be published. Required fields are marked *