ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Ad Widget ... .. Ad Widget .

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಮಳೆಯಾಗಲಿದೆ.

Ad Widget

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯೊಂದಿಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಜುಲೈ 22ರಂದು ಕೂಡ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಕರಾವಳಿ ಭಾಗದಲ್ಲಿ ಅನೇಕ ಕಡೆ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಜುಲೈ 20ರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 11 ಸೆಂ.ಮೀ. ಮಳೆಯಾಗಿದೆ. ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 10 ಸೆಂ.ಮೀ. ಮಳೆ ದಾಖಲಾಗಿದೆ.

Leave a Comment

Your email address will not be published. Required fields are marked *