23ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಸೋನಂ ವಾಂಗ್ಚುಕ್| ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಪ್ರತಿಭಟನೆಗೆ ಕಾಕ್ರೊಚ್ ಕರೆ

ಸಮಗ್ರ ನ್ಯೂಸ್: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಹಾರಗಳನ್ನು ವಿರೋಧಿಸಿ ಜೂ.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾಮಾಜಿಕ ಹೋರಾಟಗಾರ ಸೋನಮ್‌ ವಾಂಗ್ಚುಕ್‌ ನಿನ್ನೆ (ಜು.23) ರಾತ್ರಿ ತಮ್ಮ ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದಾರೆ.

Ad Widget ... .. Ad Widget .

ಪ್ರಮುಖ ಶಿಕ್ಷಣ ತಜ್ಞ ಮತ್ತು ಸಾಮಾಜಿಕ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಗುರುವಾರ ಮಧ್ಯರಾತ್ರಿಯ ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ರು. ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಡಾ. ಜಿತೇಂದ್ರ ಸಿಂಗ್ ಮತ್ತು ಲಡಾಖ್ ಅಪೆಕ್ಸ್ ಬಾಡಿ ಹಿರಿಯ ನಾಯಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

Ad Widget

ನಾಯಕರ ಜೊತೆಗಿನ ಚರ್ಚೆಗಳ ನಂತರ, ಕೇಂದ್ರ ಸಚಿವರು ನೀಡಿದ ಪಾನೀಯವನ್ನು ಸ್ವೀಕರಿಸುವ ಮೂಲಕ ಸೋನಮ್ ವಾಂಗ್ಚುಕ್ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದರು.

ಕೊನೆಗೊಳಿಸುವ ಸಂಪೂರ್ಣ ಷರತ್ತುಗಳು ಮತ್ತು ವಿವರಗಳನ್ನು ನಾನು ಶೀಘ್ರದಲ್ಲೇ ನಿಮ್ಮೆಲ್ಲರೊಂದಿಗೆ ವಿಶೇಷ ವೀಡಿಯೊ ಮೂಲಕ ಹಂಚಿಕೊಳ್ಳುತ್ತೇನೆ. ಅಲ್ಲಿಯವರೆಗೆ, ನೀವು ಅತ್ಯಂತ ಜಾಗರೂಕರಾಗಿರಿ ಮತ್ತು ಎಲ್ಲಿಯೂ ಯಾವುದೇ ಹಿಂಸಾಚಾರದಲ್ಲಿ ತೊಡಗಬೇಡಿ ಎಂದು ನಾನು ವಿನಂತಿಸುತ್ತೇನೆ ಎಂದು ಪೋಸ್ಟ್​ನಲ್ಲಿ ಬರೆದಿದ್ದಾರೆ.

ಈ ನಡುವೆ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ ಕಾಕ್ರೋಚ್ ಪಾರ್ಟಿ ಕರೆ ನೀಡಿದೆ.

ಕೇಂದ್ರ ಸರ್ಕಾರ ಹಲವು ಬಾರಿ ಮಾತುಕತೆಗೆ ಆಹ್ವಾನ ನೀಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ತಮ್ಮ ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಸಿಜೆಪಿ ನಾಯಕರು ಘೋಷಿಸಿದ್ದಾರೆ.

ಸಿಜೆಪಿ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ದೇಶದ ಎಲ್ಲಾ ಪ್ರಮುಖ ನಗರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು, ಯುವಜನರು ಮತ್ತು ಸಾರ್ವಜನಿಕರು ಒಂದೇ ದಿನ, ಒಂದೇ ಬೇಡಿಕೆಯೊಂದಿಗೆ ಶಾಂತಿಯುತ ಧರಣಿ, ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯವನ್ನು ಖಚಿತಪಡಿಸಬೇಕೆಂಬುದು ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ.

ಸಿಜೆಪಿ ಹೇಳುವಂತೆ, ಇತ್ತೀಚಿನ ದಿನಗಳಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕೆಲವೆಡೆ ಪೊಲೀಸ್ ಕ್ರಮಗಳು ನಡೆದಿದ್ದು, ಆ ಸಂತ್ರಸ್ತ ವಿದ್ಯಾರ್ಥಿಗಳೊಂದಿಗೆ ಐಕ್ಯತೆ ಪ್ರದರ್ಶಿಸುವ ಉದ್ದೇಶದಿಂದಲೇ ಈ ರಾಷ್ಟ್ರವ್ಯಾಪಿ ಪ್ರತಿಭಟನೆ ಆಯೋಜಿಸಲಾಗಿದೆ. ವಿವಿಧ ವಿದ್ಯಾರ್ಥಿ ಸಂಘಟನೆಗಳು, ಯುವ ಸಂಘಗಳು ಹಾಗೂ ಸಾಮಾಜಿಕ ಸಂಘಟನೆಗಳು ಪರಸ್ಪರ ಸಮನ್ವಯ ಸಾಧಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕೆಂದು ಸಂಘಟನೆ ಮನವಿ ಮಾಡಿದೆ.

Leave a Comment

Your email address will not be published. Required fields are marked *