ಸಮಗ್ರ ನ್ಯೂಸ್: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ನೀಡಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಇಂದು ಅರ್ಜಿ ವಿತರಣೆ ನಡೆಸಿದ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಹೈಕೋರ್ಟ್ ಜಾಮೀನು ನೀಡಿದ್ದು ಐದು ಲಕ್ಷ ಬಾಂಡ್ ಹಾಗೂ ಶೂರಿಟಿ ನೀಡಲು ಆದೇಶ ನೀಡಿದೆ. ವಿನಯ್ ಕುಲಕರ್ಣಿ ದೋಷಿ ಎಂದಿದ್ದ ತೀರ್ಪಿಗೂ ಕೂಡ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹಾಗಾಗಿ ವಿನಯ್ ಕುಲಕರ್ಣಿಗೆ ಈ ಒಂದು ಪ್ರಕರಣದಿಂದ ಬಿಗ್ ರಿಲೀಫ್ ಸಿಕ್ಕಂತಾಗಿದೆ. ವಿನಯ್ ಕುಲಕರಣಿ ಶಾಸಕ ಸ್ಥಾನಕ್ಕೆ ಇದೀಗ ಮತ್ತೆ ಜೀವ ಬಂದಿದೆ. ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಬಳಿಕ ಇಂದು ಸಂಜೆ ಅಥವಾ ನಾಳೆ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.
2016 ರಲ್ಲಿ ಯೋಗೀಶ್ ಗೌಡ ಕೊಲೆ ನಡೆದಿತ್ತು. ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಏ.17ರಂದು ಮಹತ್ವದ ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತಿತರ ಆರೋಪಿಗಳು ಹೈಕೋರ್ಟ್‌ನ ಮೊರೆ ಹೋಗಿದ್ದರು.








