July 2026

ಅತ್ಯಾಚಾರಿಗಳನ್ನು ಸಮರ್ಥಿಸಿದವರಿಗೆ ಶಿಕ್ಷಣ ಸಚಿವ ಸ್ಥಾನ| ಪ್ರಿಯಾಂಕ ಮಾತಿಗೆ ಜೋಷಿ ಕೆಂಡಾಮಂಡಲ

ಸಮಗ್ರ ನ್ಯೂಸ್: ನೀಟ್​ ಪೇಪರ್ ಲೀಕ್ ಪ್ರಕರಣ ಹಾಗೂ ಸಾರ್ವಜನಿಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆ ವಹಿಸಿರುವುದಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯು ಅತ್ಯಾಚಾರಿಗಳನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ಮೇಲೆ ನಂಬಿಕೆ ಇಟ್ಟು ಈ ಹುದ್ದೆ ನೀಡಿದೆ ಎಂದು ಅವರು ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, […]

ಅತ್ಯಾಚಾರಿಗಳನ್ನು ಸಮರ್ಥಿಸಿದವರಿಗೆ ಶಿಕ್ಷಣ ಸಚಿವ ಸ್ಥಾನ| ಪ್ರಿಯಾಂಕ ಮಾತಿಗೆ ಜೋಷಿ ಕೆಂಡಾಮಂಡಲ Read More »

ಜು.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕ ಭಾಗದಲ್ಲಿ ವಾಡಿಕೆಯಂತೆ ಪುಷ್ಯ ನಕ್ಷತ್ರದ ಮಳೆಯು ತೀವ್ರ ಸ್ವರೂಪ ಪಡೆಯಲಿದ್ದು, ಮುಂದಿನ ಕೆಲ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 29ರಂದು ಉಡುಪಿ, ದ.ಕ‌ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಶಕ್ತಿಶಾಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳ ಸಾರ್ವಜನಿಕರು ಹಾಗೂ ಮೀನುಗಾರರು

ಜು.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ Read More »

ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರ| ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದ ಬಿಹಾರ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೀಟ್ ಪರೀಕ್ಷೆ ವಿಷಯದ ಕುರಿತು ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟ ಪ್ರತಿಭಟನಾಕಾರರ ಬಿಡುಗಡೆ ಮತ್ತು ಅವರ ವಿರುದ್ಧದ ಎಫ್‌ಐಆರ್‌ಗಳನ್ನು ಹಿಂತೆಗೆದುಕೊಳ್ಳುವುದಾಗಿ ಬಿಹಾರ ಬಿಜೆಪಿ ಸರ್ಕಾರ ಸೋಮವಾರ(ಜು.27) ಪ್ರಕಟಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಬಿಹಾರ ಸರ್ಕಾರದ ಗೃಹ ಇಲಾಖೆ, ಜುಲೈ 26ರ ಸಂಜೆ 6 ಗಂಟೆಯವರೆಗೆ ದಾಖಲಾಗಿರುವ ಎಫ್​ಐಆರ್ ಮತ್ತು ಬಂಧಿಸಲ್ಪಟ್ಟ ಎಲ್ಲರನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಆರೋಪಿಗಳ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೇಳಿದೆ. ನೀಟ್ ಪತ್ರಿಕೆ

ಸಿಜೆಪಿ ಪ್ರತಿಭಟನೆ ವೇಳೆ ಹಿಂಸಾಚಾರ| ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆದ ಬಿಹಾರ ಸರ್ಕಾರ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ|

ಸಮಗ್ರ ನ್ಯೂಸ್: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿಯೇ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತಿರುವ ವೇಳೆ ಚುನಾವನಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಕಾಂಗ್ರೆಸ್​​​​ನಲ್ಲಿ ಸಂಚಲನ ಮೂಡಿಸಿದೆ. ಇದೀಗ ಸಿದ್ದರಾಮಯ್ಯನವರು ಚುನಾವಣಾ ರಾಜಕೀಯ ನಿವೃತ್ತಿಯಾಗಿರುವುದ್ಯಾಕೆ ಎನ್ನುವುದನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ಕಾರಣ ಬಿಚ್ಚಿಟ್ಟಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ| Read More »

ಕಾಮನ್‌ವೆಲ್ತ್ ಗೇಮ್ಸ್; ವೇಟ್ ಲಿಪ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ

ಸಮಗ್ರ ನ್ಯೂಸ್: ಭಾರತದ ತಾರಾ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾನುವಾರ (ಜುಲೈ 26) ಮತ್ತೊಮ್ಮೆ ಸ್ವರ್ಣ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. 49 ಕೆಜಿ ವಿಭಾಗದಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಮೀರಾಬಾಯಿ, ಕಾಮನ್‌ವೆಲ್ತ್‌ ಗೇಮ್ಸ್ ಇತಿಹಾಸದಲ್ಲಿ ಸತತ ಮೂರನೇ ಬಾರಿಗೆ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡು ದಾಖಲೆ ಬರೆದಿದ್ದಾರೆ. ಇವರ ಈ ಸಾಧನೆಯಿಂದಾಗಿ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಮತ್ತಷ್ಟು ಚುರುಕುಗೊಂಡಿದೆ.

ಕಾಮನ್‌ವೆಲ್ತ್ ಗೇಮ್ಸ್; ವೇಟ್ ಲಿಪ್ಟಿಂಗ್ ನಲ್ಲಿ ಭಾರತಕ್ಕೆ ಚಿನ್ನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ 27ರಿಂದ ಆಗಸ್ಟ್ 2ರವರೆಗೆ ಮೇಷದಿಂದ ಮೀನ ರಾಶಿಯವರೆಗೆ 12 ರಾಶಿಗಳ ಜಾತಕ ಫಲ‌ ಹೇಗಿದೆ ಎಂದು ತಿಳಿಯಿರಿ. ಮೇಷರಾಶಿ:ಈ ವಾರ ನಿಮ್ಮ ವೃತ್ತಿ ಮತ್ತು ವ್ಯವಹಾರಕ್ಕೆ ಅನುಕೂಲಕರವಾಗಿರುತ್ತದೆ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಮತ್ತು ಸಹಕಾರ ಸಿಗುತ್ತದೆ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ವಿವಾದಗಳು ಬಗೆಹರಿಯುವುದು. ಮನರಂಜನೆಗಾಗಿ ಹಣ ಖರ್ಚಾಗುವುದು. ವಾರದ ಕೊನೆಯಲ್ಲಿ ವ್ಯಾಪಾರ ಪ್ರವಾಸಗಳು ಫಲ ನೀಡುವುದು.ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿರುತ್ತದೆ. ವೃಷಭ ರಾಶಿ:ಈ ವಾರ ವೃತ್ತಿ ಅಥವಾ ವ್ಯವಹಾರದಲ್ಲಿ ಕೆಲವು ತೊಂದರೆಗಳನ್ನು ಎದುರಿಸಬೇಕಾಗಬಹುದು.

ದ್ವಾದಶ ರಾಶಿಗಳ ವಾರಭವಿಷ್ಯ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಮಗ್ರ ನ್ಯೂಸ್: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಅಲ್ಲದೇ ದೆಹಲಿಯ ಜಂತರ್-ಮಂತರ್ ನಲ್ಲಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ Read More »

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು?

ಸಮಗ್ರ ನ್ಯೂಸ್: ನೀಟ್(ಯುಜಿ) ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸಿದ ನಿರಂತರ ಪ್ರತಿಭಟನೆಗಳ ನಡುವೆಯೇ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತ್ವರಿತಗೊಳಿಸುವುದಾಗಿ ಭರವಸೆ ನೀಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಡರಾತ್ರಿಯ ವೀಡಿಯೊವನ್ನು ಹಂಚಿಕೊಂಡರು ಮತ್ತು ಅವರ ‘ಒಳನೋಟವುಳ್ಳ ಸಲಹೆಗಳಿಗಾಗಿ’ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. “ಧನ್ಯವಾದ ಸ್ನೇಹಿತರೇ! ನಿನ್ನೆ ರಾತ್ರಿ ನಿಮ್ಮೆಲ್ಲರನ್ನು ಭೇಟಿ ಮಾಡಲು ನನಗೆ ಅವಕಾಶ ಸಿಕ್ಕಿತು. ನಾನು ಪೋಸ್ಟ್ ಮಾಡಿದ ವೀಡಿಯೊಗೆ ಪ್ರತಿಕ್ರಿಯೆ ಅಪಾರವಾಗಿತ್ತು. ತಮ್ಮ ಒಳನೋಟವುಳ್ಳ ಸಲಹೆಗಳನ್ನು ಒದಗಿಸಿದ್ದಕ್ಕಾಗಿ

ಮಧ್ಯರಾತ್ರಿ ಮತ್ತೊಂದು ವಿಡಿಯೋ ಹರಿಬಿಟ್ಟ ಪ್ರಧಾನಿ ಮೋದಿ| ಈ ಬಾರಿ ಹೇಳಿದ್ದೇನು? Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಭಾರಿ ಸಾರ್ವಜನಿಕ ಆಕ್ರೋಶದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಇತಿಹಾಸದಲ್ಲೇ ಅತಿದೊಡ್ಡ ಸಾಂಸ್ಥಿಕ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಈ ಬೃಹತ್ ಸುಧಾರಣಾ ಕಾರ್ಯಾಚರಣೆಯ ಭಾಗವಾಗಿ ಈಗಾಗಲೇ ಸಂಸ್ಥೆಯ ಸುಮಾರು 47 ಸಿಬ್ಬಂದಿಗಳನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನೀಟ್-ಯುಜಿ, ಜೆಇಇ ಮೇನ್ (JEE Main) ಹಾಗೂ ಸಿಯುಇಟಿ (CUET) ಸೇರಿದಂತೆ ದೇಶದ 15 ರಿಂದ 20 ಪ್ರಮುಖ ರಾಷ್ಟ್ರೀಯ ಮಟ್ಟದ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| NTAನ 47 ಅಧಿಕಾರಿಗಳು ವಜಾ Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿರುವ ಎನ್‌ಇಇಟಿ-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಿಜೆಪಿ (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್ Read More »