July 2026

“ರಾಮಮಂದಿರಕ್ಕೆ ನಾನು ಕೊಟ್ಟ ದೇಣಿಗೆ ವಾಪಸ್ ನೀಡಿ, ಇಲ್ಲವಾದಲ್ಲಿ ಕೋರ್ಟ್ ಮೊರೆಹೋಗುವೆ” – ದಿಗ್ವಿಜಯ್ ಸಿಂಗ್

ಸಮಗ್ರ ನ್ಯೂಸ್: “ನಾನು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನೀಡಿದ್ದ 1.11 ಲಕ್ಷ ರೂಪಾಯಿ ದೇಣಿಗೆ ಹಣವನ್ನು ನನಗೆ ತಕ್ಷಣ ವಾಪಸ್ ನೀಡಿ. ಇಲ್ಲದಿದ್ದರೆ ನಾನು ನ್ಯಾಯಾಲಯದ ಮೆಟ್ಟಿಲೇರುತ್ತೇನೆ,” ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಕ್ರೋಶ ಹೊರಹಾಕಿದ್ದಾರೆ. ರಾಮಮಂದಿರ ದೇಣಿಗೆ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿರುವ ಅವರು, ಈ ಕುರಿತು ಅಯೋಧ್ಯೆಯಲ್ಲೇ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ. ತಮ್ಮ ದೇಣಿಗೆ ಹಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್, ನಾನು ರಾಮಮಂದಿರಕ್ಕೆ […]

“ರಾಮಮಂದಿರಕ್ಕೆ ನಾನು ಕೊಟ್ಟ ದೇಣಿಗೆ ವಾಪಸ್ ನೀಡಿ, ಇಲ್ಲವಾದಲ್ಲಿ ಕೋರ್ಟ್ ಮೊರೆಹೋಗುವೆ” – ದಿಗ್ವಿಜಯ್ ಸಿಂಗ್ Read More »

ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ತಾತ್ಕಾಲಿಕ ಬಂದ್

ಸಮಗ್ರ ನ್ಯೂಸ್: ನಿರಂತರ ಸುರಿಯುತ್ತಿರುವ ಮಳೆಯಿಂದ ಆಗುಂಬೆ ಘಾಟಿ ಪ್ರದೇಶದಲ್ಲಿ ಭೂಕುಸಿತದ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಹತ್ವದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಈ ಪ್ರಮುಖ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಈ ಕುರಿತು ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 169ಎ (ತೀರ್ಥಹಳ್ಳಿ-ಮಲ್ಪೆ ರಸ್ತೆ) ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಮಣ್ಣು ಹೆಚ್ಚು ತೇವಗೊಂಡಿರುವ ಕಾರಣ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ.

ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ತಾತ್ಕಾಲಿಕ ಬಂದ್ Read More »

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಫಿಕ್ಸ್| ಅಮಿತ್ ಶಾ ಗೆ ಉಪಪ್ರಧಾನಿ‌ ಪಟ್ಟ!?

ಸಮಗ್ರ ನ್ಯೂಸ್: ದೇಶದ ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದಲ್ಲಿ ಭಾರಿ ರಾಜಕೀಯ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲು ಮತ್ತು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ದೆಹಲಿಯ ರಾಜಕೀಯ ವಲಯದಲ್ಲಿ ಈಗ ತೀವ್ರ ಚರ್ಚೆಗಳು ಹಾಗೂ ಊಹಾಪೋಹಗಳು ಆರಂಭವಾಗಿವೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ಈ ಇಡೀ

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಫಿಕ್ಸ್| ಅಮಿತ್ ಶಾ ಗೆ ಉಪಪ್ರಧಾನಿ‌ ಪಟ್ಟ!? Read More »

ಮಂಗಳೂರು CEN ಪೊಲೀಸರ ಭರ್ಜರಿ ಕಾರ್ಯಾಚರಣೆ| ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕನ ಬಂಧನ

ಸಮಗ್ರ ನ್ಯೂಸ್: ಸಾರ್ವಜನಿಕರನ್ನು ಹೆದರಿಸಿ ಕೋಟ್ಯಂತರ ರೂಪಾಯಿ ಲೂಟಿ ಮಾಡುವ ಕುಖ್ಯಾತ ‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿಗಳಿಗೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಕೊಡಿಸಿ ಕಮಿಷನ್ ದಂಧೆ ನಡೆಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ (CEN) ಅಧಿಕಾರಿಗಳು ಯಶಸ್ವಿಯಾಗಿ ದಸ್ತಗಿರಿ ಮಾಡಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಸೈಬರ್ ವಂಚಕ. ಜುಲೈ 3ರಂದು ಆರೋಪಿಯನ್ನು ಬಂಧಿಸಿದ ಸೈಬರ್ ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ

ಮಂಗಳೂರು CEN ಪೊಲೀಸರ ಭರ್ಜರಿ ಕಾರ್ಯಾಚರಣೆ| ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ವಂಚಿಸುತ್ತಿದ್ದ ಸೈಬರ್ ವಂಚಕನ ಬಂಧನ Read More »

ರಾಜ್ಯಾದ್ಯಂತ ಮುಂದುವರಿದ ವರ್ಷಧಾರೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆಯ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ನಿವಾಸಿಗಳು ಮತ್ತು

ರಾಜ್ಯಾದ್ಯಂತ ಮುಂದುವರಿದ ವರ್ಷಧಾರೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆಯ ಮುನ್ಸೂಚನೆ Read More »

ಸಂಘಟಿತ ಹೋರಾಟಕ್ಕೆ ಜಯ| ವಿದ್ಯುತ್ ವಿತರಣಾ ಪರವಾನಗಿ ಅರ್ಜಿ ವಾಪಾಸ್ ಪಡೆದ ಟಾಟಾ ಪವರ್|

ಸಮಗ್ರ ನ್ಯೂಸ್: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ(ಕೆಆರ್ ಇಸಿ) ಮುಂದೆ ಟಾಟಾ ಪವರ್ ಕಂಪೆನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದ ‘ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ’ ಅರ್ಜಿಯನ್ನು ಹಿಂಪಡೆದಿದೆ. ಈ ಬೆಳವಣಿಗೆಯನ್ನು ಕಾರ್ಮಿಕ-ಜನಪರ ಸಂಘಟನೆಗಳು ಸ್ವಾಗತಿಸಿದ್ದು, ಒಗ್ಗಟ್ಟಿನ ಹೋರಾಟಕ್ಕೆ ಸಂದ ಜಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ. ಶುಕ್ರವಾರ ಪ್ರಕಟಣೆ ನೀಡಿರುವ ಪ್ರಧಾನ ಕಾರ್ಯದರ್ಶಿ ಯಶವಂತ ಟಿ, ಕೆಇಆರ್ಸಿ ಮೂಲಗಳ ಪ್ರಕಾರ ಕಲಾಪದಲ್ಲಿ ಟಾಟಾ ಪವರ್ ಕಂಪೆನಿಯ ಪ್ರತಿನಿಧಿಯು, ಸಮಾನಾಂತರ ವಿದ್ಯುತ್

ಸಂಘಟಿತ ಹೋರಾಟಕ್ಕೆ ಜಯ| ವಿದ್ಯುತ್ ವಿತರಣಾ ಪರವಾನಗಿ ಅರ್ಜಿ ವಾಪಾಸ್ ಪಡೆದ ಟಾಟಾ ಪವರ್| Read More »

ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ಜುಲೈ 10 ಅಥವಾ 12ರೊಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಿ, ಸಚಿವ ಸ್ಥಾನ ವಂಚಿತರಾಗಿರುವ ಅತೃಪ್ತ ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಹೈಕಮಾಂಡ್‌ ನಾಯಕರಾದ ರಾಹುಲ್

ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ Read More »

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಹಾಗೂ ತುಮಕೂರು ಜಿಲ್ಲಾಧಿಕಾರಿ (ಡಿಸಿ) ಶುಭಾ ಕಲ್ಯಾಣ್ ಅವರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ‘ಡಿಟೆಕ್ಟಿವ್ ಲೆಜೆಂಡ್’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಬ್ರಹ್ಮಾನಂದ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಜುಲೈ 1 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೋ ಅಪ್‌ಲೋಡ್ ಮಾಡಿದ್ದ ಬ್ರಹ್ಮಾನಂದ

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್ Read More »

ಸುಳ್ಯ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಖಾಲಿ ಖಾಲಿ| ಶೇ.90ರಷ್ಟು ಸಿಬ್ಬಂದಿ ‌ಕೊರತೆ; ಕರ್ತವ್ಯ ನಿರ್ವಹಣೆಯೇ ಸವಾಲು

ಸಮಗ್ರ ನ್ಯೂಸ್: ಸುಳ್ಯ ತಾಲ್ಲೂಕಿನ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಪಶು ಆಸ್ಪತ್ರೆಯಲ್ಲಿ ವೈದ್ಯರು ಸೇರಿ ಶೇ 90ರಷ್ಟು ಹುದ್ದೆಗಳು ಖಾಲಿ ಇದ್ದು, ಇಲಾಖೆಯ ಕೆಲಸ ನಿರ್ವಹಣೆಗೆ ತೊಂದರೆ ಆಗಿದೆ. ಸುಳ್ಯ ತಾಲ್ಲೂಕು ಪಶು ವೈದ್ಯಕೀಯ ಇಲಾಖೆಗೆ 53 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ ನಾಲ್ವರು ಪಶು ವೈದ್ಯರು ಮತ್ತು ಒಬ್ಬರು ವಾಹನ ಚಾಲಕ ಹುದ್ದೆಗಳನ್ನು ಹೊರತುಪಡಿಸಿ ಉಳಿದ 48 ಹುದ್ದೆಗಳು ಖಾಲಿ ಇವೆ. ತಾಲ್ಲೂಕಿನಲ್ಲಿ 20,300 ಹಸುಗಳು, 43 ಎಮ್ಮೆಗಳು 2,700 ಮೇಕೆಗಳು,

ಸುಳ್ಯ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆ ಖಾಲಿ ಖಾಲಿ| ಶೇ.90ರಷ್ಟು ಸಿಬ್ಬಂದಿ ‌ಕೊರತೆ; ಕರ್ತವ್ಯ ನಿರ್ವಹಣೆಯೇ ಸವಾಲು Read More »

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಹದಗೆಟ್ಟಿದೆ. ಇಂದು ಕೂಡ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಮುಖ್ಯವಾಗಿ ಉತ್ತರ ಕನ್ನಡದ ಕಾರವಾರ

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ Read More »