ಭಾರೀ ಮಳೆ ಹಿನ್ನೆಲೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಆ.03) ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Ad Widget ... .. Ad Widget .

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಅವರು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಆದೇಶ ಹೊರಡಿಸಿದ್ದಾರೆ.

Ad Widget

ಮಳೆಯ ಅಬ್ಬರದಿಂದ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ನದಿ ತೀರದ ಕಡೆ ತೆರಳದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

ಇನ್ನೊಂದೆಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಅಂಗನವಾಡಿಯಿಂದ 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ಅದೇ ರೀತಿ ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗೆ, ಜೊತೆಗೆ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದೆ.

ಈ ನಡುವೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸೂಚಿಸಿವೆ. ನದಿ, ಹಳ್ಳ-ಕೊಳ್ಳಗಳ ಬಳಿ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

Leave a Comment

Your email address will not be published. Required fields are marked *