ಸಮಗ್ರ ನ್ಯೂಸ್: ಗಜಪ್ರಸವದಂತೆ ವಿಳಂಬಗೊಂಡಿದ್ದ ಕರ್ನಾಟಕದ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ನೂತನ ಸಚಿವರ ಪಟ್ಟಿಯನ್ನು (Cabinet expansion) ಹೈಕಮ್ಯಾಂಡ್ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ರವಾನಿಸಿದ್ದು , ಇಂದು ಸಂಜೆ 4.05 ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ.
ನೂತನ ಸಚಿವರ ಹೆಸರು ಹೀಗಿದೆ:
ಪಿಎಂ ನರೇಂದ್ರ ಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ಕೆ ಎಸ್ ಬಸವಂತಪ್ಪ
ಬಿ. ನಾಗೇಂದ್ರ
ಟಿ ರಘುಮೂರ್ತಿ
ಜಮೀರ್ ಅಹ್ಮದ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಪುಟ್ಟರಂಗಶೆಟ್ಟಿ
ಮಂಕಾಳ ವೈದ್ಯ
ಅಜಯ್ ಸಿಂಗ್
ಚಲುವರಾಯ ಸ್ವಾಮಿ
ಶಿವಲಿಂಗೇ ಗೌಡ
ಎಚ್‌ಸಿ ಬಾಲಕೃಷ್ಣ
ಗಾಯತ್ರಿ ಶಾಂತೇಗೌಡ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ್
ಇಂದು ಆ.3ರ ಸಂಜೆ ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ನಡುವೆ ವಿಧಾನಸಭೆ ಸ್ಪೀಕರ್ ಆಗಿ ಗದಗ ಜಿಲ್ಲೆ ರೋಣ ಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲ್ ನೇಮಕವಾಗಿದ್ದರೆ, ಡೆಪ್ಯೂಟಿ ಸ್ಪೀಕರ್ ಆಗಿ ಕೊಡಗು ಜಿಲ್ಲೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರ ಸ್ವೀಕರಿಸಲಿದ್ದಾರೆ. ಉಳಿದಂತೆ ವಿಧಾನಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಮತ್ತು ಉಪ ಸಭಾಪತಿಯಾಗಿ ಉಮಾಶ್ರೀ ಅವರನ್ನು ನೇಮಿಸಲಾಗಿದೆ.








