ಮುಂದುವರಿದ ವರ್ಷಧಾರೆ| ಏಳು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರು

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

Ad Widget ... .. Ad Widget .

ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Ad Widget

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಆಗಸ್ಟ್ 6ರಂದು ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಹಿನ್ನೆಲೆಯಲ್ಲಿ ಜನರು, ವಿಶೇಷವಾಗಿ ಮಳೆ ಹಾಗೂ ಗಾಳಿ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಾಗಿದೆ.

Leave a Comment

Your email address will not be published. Required fields are marked *