ಮಂಗಳೂರು: ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್| ಐವರ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಪಾಂಡೇಶ್ವರದ ಖಾಸಗಿ ಮೆಡಿಕಲ್ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳ ಮೇಲೆ ರ್ಯಾಗಿಂಗ್ ನಡೆಸಿದ ಆರೋಪದ ಮೇರಿಗೆ ಐವರು ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ.

Ad Widget ... .. Ad Widget .

ಖಾಸಗಿ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಕಪ್ಪು ಬಣ್ಣದ ಶೂ ಧರಿಸಿದ್ದರು ಎನ್ನುವ ಕಾರಣಕ್ಕೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ದೂರು ನೀಡಿದ್ದಾರೆ.

Ad Widget

ಗುಜ್ಜರಕೆರೆ ಪ್ರದೇಶದಲ್ಲಿ ಘಟನೆ ನಡೆದಿದೆ. ಗುಜ್ಜರಕೆರೆ ಚಹಾ ಅಂಗಡಿಯ ಸಮೀಪ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಎರಡನೇ ವರ್ಷದ ಸುಮಾರು ಆರು ಜನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಹೇಳಿಕೆ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

Leave a Comment

Your email address will not be published. Required fields are marked *