ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾದ ಫೋಕ್ಸೋ ಆರೋಪಿ; ತೀವ್ರ ಶೋಧ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ವಿಚಾರಣಾಧೀನ ಬಂಧನದಲ್ಲಿದ್ದ ಆರೋಪಿಯೊಬ್ಬ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ತೀವ್ರ ಶೋಧ ಕಾರ್ಯ ಆರಂಭಿಸಲಾಗಿದೆ.

Ad Widget ... .. Ad Widget .

ಪರಾರಿಯಾದ ಆರೋಪಿಯನ್ನು ರೋಶನ್ ಫರ್ನಾಂಡಿಸ್ (36) ಎಂದು ಗುರುತಿಸಲಾಗಿದೆ. ಈತ ಮೂಡುಬಿದಿರೆ ತಾಲೂಕಿನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ.

Ad Widget

ಬಂಧನದ ಬಳಿಕ ರೋಶನ್‌ನನ್ನು ನ್ಯಾಯಾಂಗ ಬಂಧನದಡಿ ಜೈಲಿನಲ್ಲಿ ಇರಿಸಲಾಗಿತ್ತು. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಬೆಳಗಿನ ಜಾವ ಆಸ್ಪತ್ರೆಯಲ್ಲಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.

ಘಟನೆ ತಿಳಿಯುತ್ತಿದ್ದಂತೆಯೇ ಜೈಲು ಅಧಿಕಾರಿಗಳು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಮಾತನಾಡಿ, ಜೈಲು ಅಧಿಕಾರಿಗಳ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಮತ್ತು ಜೈಲು ಸಿಬ್ಬಂದಿ ಜಂಟಿಯಾಗಿ ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *