ಸಮಗ್ರ ನ್ಯೂಸ್: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ 80ನೇ ಸ್ವಾತಂತ್ರ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ವಂದೇ ಮಾತರಂ ಗೀತೆ ಮೊಳಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಷ್ಟ್ರಗೀತೆಯೊಂದಿಗೆ ‘ವಂದೇ ಮಾತರಂ’ ಗೀತೆಯನ್ನೂ ಹಾಡಲಾಗುವುದು ಎಂದು ರಕ್ಷಣಾ ಇಲಾಖೆ ತಿಳಿಸಿದೆ.








