ಇಂದಿನಿಂದ ರಾಜ್ಯ ವಿಧಾನಮಂಡದಲ ಮುಂಗಾರು ಅಧಿವೇಶನ| ರಾಜ್ಯ ಸರ್ಕಾರದ ಕಿವಿ ಹಿಂಡಲು ಪ್ರತಿಪಕ್ಷಗಳು ಸಜ್ಜು

ಸಮಗ್ರ ನ್ಯೂಸ್: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇದು ಮೊದಲ ಪರೀಕ್ಷೆಯಾಗಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ವಿಧಾನಮಂಡಲದ ಉಭಯ ಸದನಗಳ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ.

Ad Widget . Ad Widget .

ನೂತನ ಸಚಿವ ಬಿ. ನಾಗೇಂದ್ರ ಅವರ ಸಂಪುಟ ಸೇರ್ಪಡೆ ಮತ್ತು ಬಿಡದಿ ಟೌನ್ ಶಿಪ್ ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿ ಪಕ್ಷಗಳಾದ ಬಿಜೆಪಿ- ಜೆಡಿಎಸ್ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಮೊದಲ ದಿನ ಸಂಪ್ರದಾಯದಂತೆ ಆಗಲಿದ ಗಣ್ಯರಿಗೆ ಸಂತಾಪ ಸೂಚನೆ ನಡೆಯಲಿದ್ದು, ಸೋಮವಾರದಿಂದ ಕಲಾಪ ನಡೆಯಲಿದೆ.

Ad Widget

ಕ್ಲೀನ್ ಚಿಟ್ ಗೂ ಮೊದಲೇ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು, ಕಾವೇರಿ ನದಿ ನೀರಿನ ವಿಚಾರ, ಕೆಪಿಎಸ್ಸಿ ಹಗರಣ, ಬಿಡದಿ ಟೌನ್ ಶಿಪ್ ವಿಚಾರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ದಟ್ಟವಾಗಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಿ ಇದು ಮೊದಲ ಅಧಿವೇಶನ. ಅವರ ಸಂಪುಟದ ಹಲವು ಸಚಿವರಿಗೂ ಕೂಡ ಮೊದಲ ಅಧಿವೇಶನ ಇದಾಗಿದೆ. ಅಧಿವೇಶನದಲ್ಲಿ ವಿಧಾನಸಭೆಗೆ ಹೊಸ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ. ವಿಧಾನ ಪರಿಷತ್ ನಲ್ಲಿಯೂ ಹೊಸ ಸಭಾಪತಿ, ಉಪಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Leave a Comment

Your email address will not be published. Required fields are marked *