ಮೀಸಲಾತಿ ಬಗ್ಗೆ ಅವಹೇಳನ ಆರೋಪ| ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಮೀಸಲಾತಿ ಕುರಿತು ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ಆರೋಪದಡಿ ಖಾಸಗಿ ವಾಹಿನಿಯ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

. Ad Widget . Ad Widget . Ad Widget .

ನಿರೂಪಕ ಅರುಣ್ ಬಡಿಗೇರ್ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಮೀಸಲಾತಿ ಹಾಗೂ ಮೀಸಲಾತಿ ಫಲಾನುಭವಿಗಳ ಕುರಿತು ಅವಹೇಳನಕಾರಿ, ಪೂರ್ವಾಗ್ರಹಪೀಡಿತ ಮತ್ತು ಸಮಾಜದಲ್ಲಿ ದ್ವೇಷ, ವಿಭಜನೆ ಹಾಗೂ ತಪ್ಪು ಅಭಿಪ್ರಾಯಗಳನ್ನು ಉಂಟುಮಾಡುವ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಹೀಗಾಗಿ ನಿರೂಪಕ ಅರುಣ್ ಬಡಿಗೇರ್ ಹಾಗೂ ಖಾಸಗಿ ವಾಹಿನಿಯ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ನೆಲಮಂಗಲದ ನಿವಾಸಿ ಅನಂತಕುಮಾರ್ ಡಿ.ಆರ್. ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ನೆಲಮಂಗಲ ಗ್ರಾಮಾಂತರ ಪೊಲೀಸರು ಭಾರತೀಯ ನ್ಯಾಯ ಸಂಹಿತೆ(ಬಿಎನ್‍ಎಸ್) 196(1), 353(1), 353(2) ಅಡಿ ಎಫ್‍ಐಆರ್ ದಾಖಲಾಗಿದೆ.

Leave a Comment

Your email address will not be published. Required fields are marked *