ವಿಧಾನ ಪರಿಷತ್ ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಆಯ್ಕೆಯಾಗಿದ್ದಾರೆ. ಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಪರ 38 ಮತಗಳು ಚಲಾವಣೆಯಾಗಿವೆ.

Ad Widget . Ad Widget . Ad Widget . Ad Widget . Ad Widget .

ಇತ್ತೀಚೆಗೆ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಹುದ್ದೆ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಸಲೀಂ ಅಹ್ಮದ್ ಅವರನ್ನು ಕಾಂಗ್ರೆಸ್ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು.ಸಲೀಂ ಅಹ್ಮದ್ ಪರ 38 ಮತಗಳು ಚಲಾವಣೆಯಾಗಿವೆ. ಹಾಗೂ ಅವರ ವಿರುದ್ಧವಾಗಿ 30 ಮತಗಳು ಚಲಾವಣೆಯಾಗಿದೆ. ಧ್ವನಿಮತದ ಮೂಲಕ ಅವರನ್ನು ಆಯ್ಕೆ ಮಾಡಲಾಯಿತು.

Ad Widget . Ad Widget .

ಸಲೀಂ ಅಹ್ಮದ್ ಅವರು ಹುಬ್ಬಳ್ಳಿ-ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇತ್ತೀಚಿನವರೆಗೆ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದರು.

Leave a Comment

Your email address will not be published. Required fields are marked *