ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಅಂಗವಾಗಿ ಸುಳ್ಯ ಹಾಗೂ ಕಡಬ ತಾಲ್ಲೂಕಿನ 161 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ, ಸುಳ್ಯ ಮತ್ತು ಕಡಬ ತಾಲ್ಲೂಕು ಪಂಚಾಯಿತಿ, ಕಡಬ ಪಟ್ಟಣ ಪಂಚಾಯಿತಿಗೆ ಸುಮಾರು ₹3 ಲಕ್ಷ ಮೌಲ್ಯದ 60 ಸಾವಿರ ಲಾಡು ಪ್ರಸಾದವನ್ನು ವಿತರಿಸಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ದಲ್ಲಿ ವಿದ್ಯಾರ್ಥಿಗಳು ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗೆ ಕ್ಷೇತ್ರದ ಪ್ರಸಾದ ತಲುಪಿಸುವ ಉದ್ದೇಶದಿಂದ ದೇವಳದ ವತಿಯಿಂದ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಸ್ವಾತಂತ್ರ್ಯ ದಿನಾಚರಣೆ ದಿನ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ, ಬೆಳಗಿನ ಉಪಾಹಾರಕ್ಕೆ, ಮಧ್ಯಾಹ್ನದ ಊಟದ ಸಂದರ್ಭದಲ್ಲಿ ದೇವರ ಲಾಡು ಪ್ರಸಾದ ವಿತರಿಸಲಾಗುವುದು ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ.




























