ವಿಟ್ಲ: ಬಸ್ಸಿನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ|ಆರೋಪಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಟ್ಲ ಠಾಣೆ ಪೊಲೀಸರು ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಆಗಸ್ಟ್ 15 ರಂದು ಸಂತ್ರಸ್ತ ಅಪ್ರಾಪ್ತ ಬಾಲಕನು ವಿಟ್ಲ ಠಾಣಾ ವ್ಯಾಪ್ತಿಯ ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಬರುತ್ತಿದ್ದಾಗ, ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸನ್ನೇರಿದ ಅಪರಿಚಿತ ವ್ಯಕ್ತಿ (ಉಮೇಶ್) ಬಾಲಕನ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ್ದ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಳಿಕ ಬಾಲಕ ತನ್ನ ಮನೆಗೆ ತೆರಳಿದಾಗ, ಆತನನ್ನು ಬೆನ್ನಟ್ಟಿಕೊಂಡು ಮನೆಗೆ ಬಂದ ಆರೋಪಿಯು ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ, ಯಾರಿಗಾದರೂ ವಿಷಯ ತಿಳಿಸಿದರೆ ತೊಂದರೆ ಕೊಡುವುದಾಗಿ ಬೆದರಿಕೆಯೊಡ್ಡಿದ್ದ. ಈ ಸಂಬಂಧ ಬಾಲಕ ಹಾಗೂ ಆತನ ಕುಟುಂಬಸ್ಥರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 179/2026 ರಲ್ಲಿ ಪೋಕ್ಸೋ ಕಾಯ್ದೆ 2012 ರ ಕಲಂ 4(2) ಹಾಗೂ ಬಿಎನ್‌ಎಸ್ (BNS) 2023 ರ ಕಲಂ 351(2) ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ವಿಟ್ಲ ಠಾಣೆ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ ಆರೋಪಿ ಉಮೇಶ್‌ ನನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Leave a Comment

Your email address will not be published. Required fields are marked *