ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ| ತಿಂಗಳಿಗೆ ಒಂದು ರಜೆ, ಜೊತೆಗೆ ಮುಟ್ಟಿನ ರಜೆಯೂ ಮಂಜೂರು

ಸಮಗ್ರ ನ್ಯೂಸ್: ರಾಜ್ಯದ ಸರ್ಕಾರಿ ಪದವಿ ಪೂರ್ವ (ಪಿಯು) ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ರಜೆ ಹಾಗೂ ಮಹಿಳಾ ಉಪನ್ಯಾಸಕಿಯರಿಗೆ ಮಾಸಿಕ ಮುಟ್ಟಿನ ರಜೆ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸುವ ಕುರಿತು ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

ಈ ಹಿಂದೆ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹12,000 ಗೌರವ ಸಂಭಾವನೆ ನೀಡಲಾಗುತ್ತಿತ್ತು. ಇದನ್ನು ₹14,000 ಕ್ಕೆ ಹೆಚ್ಚಿಸಲಾಗಿದೆ. ಸದ್ಯದ ನಿಯಮಗಳ ಪ್ರಕಾರ ಗೌರವಧನದ ಹೊರತಾಗಿ ಇತರೆ ಯಾವುದೇ ಸೌಲಭ್ಯಗಳನ್ನು ನೀಡಲು ಅವಕಾಶವಿಲ್ಲ. ಆದಾಗ್ಯೂ, ಗೌರವಧನ ಹೆಚ್ಚಳ ಹಾಗೂ ರಜೆ ಸೌಲಭ್ಯಗಳ ಒದಗಿಸುವಿಕೆ ಸಂಬಂಧ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅತಿಥಿ ಉಪನ್ಯಾಸಕರ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಬೋಧನೆಗಾಗಿ ಅರ್ಹ ಹಾಗೂ ಅನುಭವಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಪ್ರಸ್ತುತ ಪ್ರತಿಯೊಬ್ಬ ಅತಿಥಿ ಉಪನ್ಯಾಸಕರಿಗೆ ವಾರಕ್ಕೆ 10 ಗಂಟೆಗಳ ಕಾರ್ಯಭಾರವನ್ನು ನಿಗದಿಪಡಿಸಲಾಗಿದೆ. ಒಂದು ವೇಳೆ ಕಾರ್ಯಭಾರ ಹೆಚ್ಚಾದರೆ, ನಿಯಮಾನುಸಾರ ಮತ್ತೊಬ್ಬ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ಸದನಕ್ಕೆ ವಿವರಿಸಿದರು.

Leave a Comment

Your email address will not be published. Required fields are marked *