ನೈಋತ್ಯ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಮಂಗಳೂರು ವಿಲೀನ!

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೇ ಪ್ರಯಾಣಿಕರ ದಶಕಗಳ ಬಾಕಿ ಬೇಡಿಕೆಯೊಂದು ಕೊನೆಗೂ ಈಡೇರುವ ಹಂತಕ್ಕೆ ತಲುಪಿದೆ. ಪ್ರಸ್ತುತ ದಕ್ಷಿಣ ರೈಲ್ವೆ ವಲಯದ ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲು ಭಾರತೀಯ ರೈಲ್ವೆ ಇಲಾಖೆ ನಿರ್ಧರಿಸಿದೆ.

. Ad Widget . Ad Widget

ಈ ಕುರಿತು ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮಾಹಿತಿ ನೀಡಿದ್ದಾರೆ. ಹೊಸ ನಿರ್ಧಾರದಂತೆ ಉಳ್ಳಾಲವರೆಗಿನ ಮಂಗಳೂರು ರೈಲ್ವೆ ವ್ಯಾಪ್ತಿಯು ದಕ್ಷಿಣ ರೈಲ್ವೆಯಿಂದ ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ವರ್ಗಾವಣೆಯಾಗಲಿದೆ. ಇದರಿಂದಾಗಿ ದಕ್ಷಿಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ವಲಯಗಳ ನಡುವಿನ ಇಂಟರ್ಚೇಂಜ್ ಪಾಯಿಂಟ್ ಇನ್ನುಮುಂದೆ ಪಡೀಲ್ ಬದಲಿಗೆ ಉಳ್ಳಾಲಕ್ಕೆ ಸ್ಥಳಾಂತರಗೊಳ್ಳಲಿದೆ.

. Ad Widget . . Ad Widget . Ad Widget

ತೋಕೂರು ನಿಲ್ದಾಣವು ಕೊಂಕಣ ರೈಲ್ವೆಯ ಭಾಗವಾಗಿಯೇ ಮುಂದುವರಿಯಲಿದ್ದು, ಕೊಂಕಣ ಹಾಗೂ ನೈಋತ್ಯ ರೈಲ್ವೆ ನಡುವಿನ ಮುಖ್ಯ ವಿನಿಮಯ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಈ ಸಂಬಂಧ ಶೀಘ್ರದಲ್ಲೇ ರೈಲ್ವೆ ಸಚಿವಾಲಯದಿಂದ ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಈ ಐತಿಹಾಸಿಕ ನಿರ್ಧಾರದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ, “ದಕ್ಷಿಣ ಮತ್ತು ನೈಋತ್ಯ ರೈಲ್ವೆಗಳಾಗಿ ಇಬ್ಬಾಗವಾಗಿದ್ದ ಮಂಗಳೂರು ರೈಲ್ವೆ ಪ್ರದೇಶವು ಕೊನೆಗೂ ಒಂದೇ ಸೂರಿನಡಿಗೆ ಬರುತ್ತಿದೆ. ಮೈಸೂರು ವಿಭಾಗದ ಅಡಿಯಲ್ಲಿ ತರುತ್ತಿರುವುದರಿಂದ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ” ಎಂದು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿದ್ದಾರೆ.

Leave a Comment

Your email address will not be published. Required fields are marked *