ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ| ಆರೋಪಿಗೆ 5 ವರ್ಷಗಳ ಸಜೆ ಜೊತೆಗೆ ದಂಡ

ಸಮಗ್ರ ನ್ಯೂಸ್: 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕುದ್ಮಾರು ಗ್ರಾಮದ ಅಬ್ದುಲ್ಲಾನಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಸೆಕ್ಷನ್ 10ರ ಅಡಿ 5 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 35 ಸಾವಿರ ದಂಡ ವಿಧಿಸಿದ್ದಾರೆ.

. Ad Widget . Ad Widget . Ad Widget .

ಬಾಲಕಿ ಎಳನೀರು ಖರೀದಿಸಲು ಅಬ್ದುಲ್ಲಾನ ಅಂಗಡಿಗೆ 2020ರ ಫೆ.14ರಂದು ತೆರಳಿದ್ದಳು. ಚಿಲ್ಲರೆ ಮರಳಿಸುವುದಾಗಿ ಹೇಳಿ ಬಾಲಕಿಯನ್ನು ಅಂಗಡಿಯೊಳಗೆ ಕರೆದೊಯ್ದ ಆತ ಜ್ಯೂಸ್ ಬೇಕೇ, ತಿನ್ನಲು ಏನಾದರೂ ಬೇಕೇ ಎಂದು ಪುಸಲಾಯಿಸಿ ಅಸಭ್ಯ ವಾಗಿ ವರ್ತಿಸಿದ್ದ. ಬಾಲಕಿ ಅಲ್ಲಿಂದ ಹೊರಬರಲು ಮುಂದಾದಾಗ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ದೂರಿನಲ್ಲಿ ಆರೋಪಿದ್ದರು. ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿದ್ದ ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್‌ಚಂದ್ರ ಜೋಗಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ದಂಡದ ಮೊತ್ತದಲ್ಲಿ ₹ 20 ಸಾವಿರ ವನ್ನು ಬಾಲಕಿಗೆ ಪಾವತಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ₹ 1.50 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರ್ಕಾರದ ಪರವಾಗಿ ವಕೀಲ ಕುದ್ರಿಯ ಪುಷ್ಪರಾಜ ಅಡ್ಯಂತಾಯ ವಾದಿಸಿದ್ದರು. 16 ಸಾಕ್ಷಿಗಳನ್ನು ವಿಚಾರಿಸಲಾಗಿತ್ತು.

Leave a Comment

Your email address will not be published. Required fields are marked *