ಆಟವಾಡುತ್ತಾ ಟ್ರಾಕ್ಟರ್ ಕೀ ಆನ್ ಮಾಡಿದ ಮಗು| ತಂದೆ ದಾರುಣ ಸಾವು

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್‌ನ ಕೀ ಆನ್ ಮಾಡಿದ ಪರಿಣಾಮ, ಏಕಾಏಕಿ ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ದಾರುಣವಾಗಿ ಮೃತಪಟ್ಟ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

. Ad Widget . Ad Widget . Ad Widget .

ಮೃತರನ್ನು 37 ವರ್ಷದ ಯಶ್ವಂತ್ ಎಂದು ಗುರುತಿಸಲಾಗಿದೆ. ಅವರು ಸಾರಿಗೆ ಸಂಸ್ಥೆಯಲ್ಲಿ ನೌಕರರಾಗಿದ್ದು, ಅರಕಲಗೂಡು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಯಶ್ವಂತ್ ಅವರು ಹೊಸ ಮನೆ ನಿರ್ಮಿಸುತ್ತಿದ್ದು, ಆರ್‌ಸಿಸಿ ಕೆಲಸಕ್ಕೆ ಅಗತ್ಯವಿದ್ದ ಸೆಂಟ್ರಿಂಗ್ ಸಾಮಗ್ರಿಗಳನ್ನು ಟ್ರ್ಯಾಕ್ಟರ್‌ನಲ್ಲಿ ತರಿಸಿದ್ದರು. ಈ ವೇಳೆ ತಮ್ಮ ಮೂರು ವರ್ಷದ ಮಗುವನ್ನು ಟ್ರ್ಯಾಕ್ಟರ್ ಮೇಲೆ ಕೂರಿಸಿಕೊಂಡು ಆಟವಾಡಿಸುತ್ತಿದ್ದರು ಎನ್ನಲಾಗಿದೆ.

ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ಟ್ರ್ಯಾಕ್ಟರ್‌ನ ಕೀ ಆನ್ ಮಾಡಿದೆ. ಪರಿಣಾಮ ಟ್ರ್ಯಾಕ್ಟರ್ ಏಕಾಏಕಿ ಮುಂದಕ್ಕೆ ಚಲಿಸಿದೆ. ಮಗು ಕೆಳಗೆ ಬೀಳಬಹುದು ಎಂದು ಆತಂಕಗೊಂಡ ಯಶ್ವಂತ್, ಮಗುವನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಚಲಿಸುತ್ತಿದ್ದ ಟ್ರ್ಯಾಕ್ಟರ್‌ನ ಚಕ್ರ ಅವರ ಮೇಲೆ ಹರಿದಿದೆ.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಯಶ್ವಂತ್ ಅವರನ್ನು ಕೂಡಲೇ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಮಾಹಿತಿ ತಿಳಿದು ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *