ರಾಜ್ಯಾದ್ಯಂತ ಚುರುಕುಗೊಂಡ ಮುಂಗಾರು| ಕರಾವಳಿಯ ಹಲವೆಡೆ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಅನೇಕ ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು, ಬೆಂಗಳೂರಲ್ಲೂ ಕೂಡ ಹೆಚ್ಚಿನ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರುತ್ತಿದೆ.

. Ad Widget . Ad Widget . Ad Widget .

ಆಗಸ್ಟ್‌ 24ರಂದು ಅತಿಹೆಚ್ಚು ಮಳೆ 9 ಸೆಂ.ಮೀ. ಬಿದ್ದಿತ್ತು. ಇನ್ನು ಬೀದರ್‌ನ ಹುಮನಾಬಾದ್‌, ಕೊಡಗಿನ ಶ್ರೀಮಂಗಲ, ಶಿವಮೊಗ್ಗದ ಆಗುಂಬೆ, ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಭಾರಿ ಮಳೆಯಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ವಿಜಯಪುರ, ಬೆಳಗಾವಿ, ಕಲಬುರ್ಗಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೀದರ್‌, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಕಡಿಮೆ ಇರಲಿದ್ದು, ಸಾಧಾರಣ ಮಳೆ ಬೀಳಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗದಲ್ಲಿ ಒಂದೆರಡು ಸ್ಥಳಗಳಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆ ಅಬ್ಬರ ಉಂಟಾಗಲಿದೆ. ಹಾಗೇ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ವಿಪರೀತ ಗಾಳಿ-ಮಳೆಯ ಕಾರಣ, ಆಗಸ್ಟ್‌ 26ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Leave a Comment

Your email address will not be published. Required fields are marked *