ಬಂಗಾರ ಈಗ ಮತ್ತಷ್ಟು ಭಾರ| ದೇಶೀಯ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡ ಚಿನ್ನ

ಸಮಗ್ರ ನ್ಯೂಸ್: ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ತೀವ್ರ ಏರಿಳಿತ ಹಾಗೂ ಅಮೆರಿಕ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ರಾಜಕೀಯ ಉದ್ವಿಗ್ನತೆಯ ನೇರ ಪರಿಣಾಮ ಈಗ ಹೂಡಿಕೆದಾರರು ಮತ್ತು ಗ್ರಾಹಕರ ಜೇಬಿನ ಮೇಲೆ ಬಿದ್ದಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯು ಭಾರಿ ಏರಿಕೆ ಕಂಡಿದ್ದು, ಕಳೆದ ಐದು ತಿಂಗಳಲ್ಲೇ ಅತ್ಯಂತ ಗರಿಷ್ಠ ಮಟ್ಟವನ್ನು ತಲುಪಿದೆ.

. Ad Widget . Ad Widget

ಆಲ್ ಇಂಡಿಯಾ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯ ಪ್ರಕಾರ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 900 ರೂಪಾಯಿ ಏರಿಕೆಯಾಗಿದೆ. ಶುಕ್ರವಾರ ಮಾರುಕಟ್ಟೆ ಮುಕ್ತಾಯಗೊಂಡಾಗ 1,63,500 ರೂಪಾಯಿಯಷ್ಟಿದ್ದ 10 ಗ್ರಾಂ ಚಿನ್ನದ ದರ, ಸೋಮವಾರ ತೆರಿಗೆಗಳು ಸೇರಿದಂತೆ 1,64,400 ರೂಪಾಯಿಗೆ ತಲುಪಿದೆ. ಈ ಮೊದಲು ಕಳೆದ ಮಾರ್ಚ್ 9ರಂದು ಚಿನ್ನದ ಬೆಲೆ ಈ ಮಟ್ಟದ ದಾಖಲೆ ಬರೆದಿತ್ತು.

. Ad Widget . . Ad Widget . Ad Widget

ಚಿನ್ನ ಮಾತ್ರವಲ್ಲದೆ ಬೆಳ್ಳಿಯ ಬೆಲೆಯಲ್ಲೂ ಗಣನೀಯ ಏರಿಕೆ ಕಂಡುಬಂದಿದ್ದು, ಪ್ರತಿ ಕೆಜಿ ಬೆಳ್ಳಿಯ ದರ ಭರ್ಜರಿ 2,60,000 ರೂಪಾಯಿಗೆ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕನ್ ಡಾಲರ್ ಮೌಲ್ಯ ಕುಸಿತ ಕಂಡಿರುವುದು ಮತ್ತು ಜಾಗತಿಕ ಅನಿಶ್ಚಿತತೆಯ ವಾತಾವರಣದಲ್ಲಿ ಸುರಕ್ಷಿತ ಹೂಡಿಕೆಯಾಗಿ ಚಿನ್ನ-ಬೆಳ್ಳಿಯತ್ತ ಜನರ ಒಲವು ಹೆಚ್ಚಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

Leave a Comment

Your email address will not be published. Required fields are marked *